ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ₹ 21,400 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Published 2 ಮಾರ್ಚ್ 2024, 11:06 IST
Last Updated 2 ಮಾರ್ಚ್ 2024, 11:06 IST
ಅಕ್ಷರ ಗಾತ್ರ

ಔರಂಗಾಬಾದ್: ಬಿಹಾರದ ಔರಂಗಾಬಾದ್‌ನಲ್ಲಿ ₹21,400 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು.

ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ತೊರೆದು ಎನ್‌ಡಿಎ ಜೊತೆ ಸೇರಿ ಸರ್ಕಾರ ರಚನೆ ಮಾಡಿದ ಬಳಿಕ ಪ್ರಧಾನಿ ಮೋದಿಯವರ ಮೊದಲ ಬಿಹಾರ ಭೇಟಿ ಇದಾಗಿದೆ.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ ನಿತೀಶ್ ಕುಮಾರ್, ನಾನು ಶಾಶ್ವತವಾಗಿ ಎನ್‌ಡಿಎಯಲ್ಲಿ ಉಳಿಯುತ್ತೇನೆ ಎಂದು ಪ್ರಧಾನಿಗೆ ತಿಳಿಸಿದರು.

18 ಸಾವಿರ ಕೋಟಿಗೂ ಅಧಿಕ ಮೊತ್ತದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಮೋದಿ ಉದ್ಘಾಟಿಸಿದರು. ಬಳಿಕ ಈಗಿರುವ ಜೆಪಿ ಗಂಗಾ ಸೇತುವಿಗೆ ಸಮಾನಾಂತರವಾಗಿ ನಿರ್ಮಾಣಗೊಳ್ಳಲಿರುವ ಗಂಗಾ ನದಿಯ ಮೇಲೆ ಆರು ಪಥಗಳ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮೂರು ರೈಲ್ವೆ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ನಮಾಮಿ ಗಂಗೆ ಯೋಜನೆಯಡಿ 2,190 ಕೋಟಿ ಮೌಲ್ಯದ 12 ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಿದರು. ಇವುಗಳಲ್ಲಿ ಪಾಟ್ನಾ, ಸೋನೆಪುರ, ನೌಗಾಚಿಯಾ ಮತ್ತು ಚಾಪ್ರಾದಲ್ಲಿನ ಒಳಚರಂಡಿ ಸಂಸ್ಕರಣಾ ಘಟಕಗಳು ಸೇರಿವೆ.

ಬಳಿಕ ಪಾಟ್ನಾದಲ್ಲಿ ₹ 200 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಯೂನಿಟಿ ಮಾಲ್‌ಗೆ ಶಂಕುಸ್ಥಾಪನೆ ನೆರವೇರಿಸಿದರು. ಇದು  'ಒಂದು ಜಿಲ್ಲೆ, ಒಂದು ಉತ್ಪನ್ನ' ಯೋಜನೆಗೆ ಉತ್ತೇಜನ ನೀಡುತ್ತದೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಉಪ ಮುಖ್ಯಮಂತ್ರಿಗಳಾದ ಸಮತ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಹಾಗೂ ಕೇಂದ್ರ ಸಚಿವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT