ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಂಚಿ: ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಮಿಗ್ ಯುದ್ಧವಿಮಾನ ಅನಾವರಣ

1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಬಳಕೆ
Published 15 ನವೆಂಬರ್ 2023, 11:34 IST
Last Updated 15 ನವೆಂಬರ್ 2023, 11:34 IST
ಅಕ್ಷರ ಗಾತ್ರ

ರಾಂಚಿ: ಕಾರ್ಯಾಚರಣೆ ಸ್ಥಗಿತಗೊಳಿಸಿರುವ, ಮಿಗ್–211 ಯುದ್ಧವಿಮಾನವನ್ನು ಇಲ್ಲಿನ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಅನಾವರಣಗೊಳಿಸಿದರು.

ಈ ಯುದ್ಧವಿಮಾನವನ್ನು, ಬಾಂಗ್ಲಾದೇಶ ವಿಮೋಚನೆಗಾಗಿ 1971ರಲ್ಲಿ ನಡೆದ ಯುದ್ಧದಲ್ಲಿ ಬಳಸಲಾಗಿತ್ತು.

‘ನಿಷ್ಕ್ರಿಯಗೊಳಿಸಿರುವ ಮಿಗ್‌–211 ಯುದ್ಧವಿಮಾನವನ್ನು ಪ್ರಧಾನಿ ಮೋದಿ ರಾಜಭವನ ಆವರಣದಲ್ಲಿ ಅನಾವರಣಗೊಳಿಸಿದ್ದಾರೆ. ಈ ಯುದ್ಧವಿಮಾನವನ್ನು ಭಾರತೀಯ ವಾಯುಪಡೆಗೆ 1964ರಲ್ಲಿ ಸೇರ್ಪಡೆ ಮಾಡಲಾಗಿತ್ತು’ ಎಂದು ಜಾರ್ಖಂಡ್ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ. 

ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಇದ್ದರು.

ನಮನ: ಇದಕ್ಕೂ ಮುನ್ನ, ಬುಡಕಟ್ಟು ಜನಾಂಗದ ಹೋರಾಟಗಾರ ಬಿರ್ಸಾ ಮುಂಡಾ ಅವರ ಹುಟ್ಟೂರು, ಖೂಂಟಿ ಜಿಲ್ಲೆಯಲ್ಲಿರುವ ಉಲಿಹಾತು ಗ್ರಾಮಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಮುಂಡಾ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಮುಂಡಾ ಅವರ ಜನ್ಮದಿನವನ್ನು ಜನಜಾತೀಯ ಗೌರವ ದಿನವನ್ನಾಗಿ ಆಚರಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT