ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ₹68,000 ಕೋಟಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ

Published 3 ಫೆಬ್ರುವರಿ 2024, 16:13 IST
Last Updated 3 ಫೆಬ್ರುವರಿ 2024, 16:13 IST
ಅಕ್ಷರ ಗಾತ್ರ

ಸಂಬಲ್‌ಪುರ (ಒಡಿಶಾ) (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾದಲ್ಲಿ ಶನಿವಾರ ₹68,000 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

₹400 ಕೋಟಿ ವೆಚ್ಚದ ಸಂಬಲ್‌ಪುರದ ಐಐಎಂ ಕ್ಯಾಂಪಸ್‌ಗೆ ಅಡಿಗಲ್ಲು ಹಾಕಿದ ಪ್ರಧಾನಿ ಮೋದಿ, ವಿದ್ಯುತ್, ರಸ್ತೆಗಳು, ರೈಲ್ವೆ ಮತ್ತಿತರ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು.           

18 ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ‘ಈ ಯೋಜನೆಗಳಿಂದ ರಾಜ್ಯದ ಯುವಜನತೆಗೆ ನೆರವು ಸಿಗಲಿದ್ದು, ಉದ್ಯೋಗ ಸೃಷ್ಟಿ ಆಗಲಿದೆ.  ಕೇಂದ್ರ ಸರ್ಕಾರವು ಪ್ರತಿಯೊಂದು ಕ್ಷೇತ್ರದಲ್ಲೂ ಒಡಿಶಾಗೆ ಬೆಂಬಲ ನೀಡುತ್ತಿದೆ‘ ಎಂದು ಹೇಳಿದರು.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ರಾಜ್ಯಪಾಲ ರಘುಬರ್ ದಾಸ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಬಿಶ್ವೇಶ್ವರ್ ತುಡು ಹಾಗೂ ಅಶ್ವಿನಿ ವೈಷ್ಣವ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT