ರಾಂಚಿ: ಜಾರ್ಖಂಡ್‌ನಲ್ಲಿ ₹83,700 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಬುಧವಾರ) ಚಾಲನೆ ನೀಡಿದ್ದಾರೆ.
ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ₹79,150 ಕೋಟಿ ವೆಚ್ಚದಲ್ಲಿ 'ಧರ್ತಿ ಆಬಾ ಜನಜಾತಿಯ ಗ್ರಾಮ ಉತ್ಕರ್ಷ್ ಅಭಿಯಾನ'ಕ್ಕೆ ಪ್ರಧಾನಿ ಚಾಲನೆ ನೀಡಿದ್ದಾರೆ. ಆ ಮೂಲಕ ದೇಶದಾದ್ಯಂತ ಬುಡಕಟ್ಟು ಸಮುದಾಯಗಳ ಸಮಗ್ರ ಅಭಿವೃದ್ಧಿಯನ್ನು ಖಾತ್ರಿಪಡಿಸುವ ಉದ್ದೇಶ ಹೊಂದಲಾಗಿದೆ.
ಈ ಯೋಜನೆಯಿಂದ 30 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 549 ಜಿಲ್ಲೆಗಳ ಐದು ಕೋಟಿಗೂ ಹೆಚ್ಚು ಬುಡಕ್ಕಟ್ಟು ಜನಾಂಗದವರಿಗೆ ಪ್ರಯೋಜನ ಸಿಗಲಿದೆ.
₹1,360 ಕೋಟಿ ಮೌಲ್ಯದ 'ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ'ಕ್ಕೂ (PM-JANMAN) ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.
ಇದು 1,380 ಕಿಮೀ ರಸ್ತೆ, 120 ಅಂಗನವಾಡಿ ಕೇಂದ್ರಗಳು, 250 ಬಹು ಉದ್ದೇಶದ ಕೇಂದ್ರಗಳು ಮತ್ತು 10 ಶಾಲಾ ಹಾಸ್ಟೆಲ್‌ಗಳನ್ನು ಒಳಗೊಂಡಿವೆ.