ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್‌ ಭವನ ಉದ್ಘಾಟನೆ ಸ್ಮರಣಾರ್ಥ ₹75 ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ

Published 28 ಮೇ 2023, 8:10 IST
Last Updated 28 ಮೇ 2023, 8:10 IST
ಅಕ್ಷರ ಗಾತ್ರ

ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಂಚೆ ಚೀಟಿ ಮತ್ತು ₹75 ನಾಣ್ಯವನ್ನು ಬಿಡುಗಡೆ ಮಾಡಿದರು.

ನೂತನ ಸಂಸತ್ ಭವನದ ಲೋಕಸಭೆಯ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ನಾಣ್ಯ ಮತ್ತು ಅಂಚೆಚೀಟಿ ಬಿಡುಗಡೆ ಮಾಡಿದರು.

ಕೇಂದ್ರ ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಆರ್ಥಿಕ ವ್ಯವಹಾರಗಳ ಇಲಾಖೆಯ ಗೆಜೆಟ್ ಅಧಿಸೂಚನೆಯ ಪ್ರಕಾರ, ನಾಣ್ಯದ ತೂಕ 34.65 ರಿಂದ 35.35 ಗ್ರಾಂ ಇರಲಿದೆ.

ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಚಿತ್ರವಿದೆ. ಅದರ ಸುತ್ತಲೂ ದೇವನಾಗರಿ ಲಿಪಿಯಲ್ಲಿ "ಭಾರತ್" ಮತ್ತು ಇಂಗ್ಲಿಷ್‌ನಲ್ಲಿ "ಇಂಡಿಯಾ" ಎಂದು ಬರೆಯಲಾಗಿದೆ.

ಸಿಂಹದ ಲಾಂಛನದ ಕೆಳಗೆ ಅಂಕಿಗಳಲ್ಲಿ 75 ಎಂದೂ, ರೂಪಾಯಿ ಚಿಹ್ನೆ ‘₹’ಯನ್ನು ಮುದ್ರಿಸಲಾಗಿದೆ.

ನಾಣ್ಯದ ಇನ್ನೊಂದು ಬದಿಯಲ್ಲಿ ಸಂಸತ್‌ ಭವನದ ಚಿತ್ರ ಮತ್ತು "2023"ನೇ ಇಸವಿಯನ್ನು ಮುದ್ರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT