ನವದೆಹಲಿ: ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 16ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ, ಕೃಷಿ ಕಾಯ್ದೆಗಳಿಗೆ ಸಂಬಂಧಿಸಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪೀಯೂಷ್ ಗೋಯಲ್ ಅವರು ನೀಡುವ ಮಾಹಿತಿಯನ್ನು ಆಲಿಸಬೇಕು ಎಂದು ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

‘ನನ್ನ ಇಬ್ಬರು ಕ್ಯಾಬಿನೆಟ್ ಸಹೋದ್ಯೋಗಿಗಳಾದ ನರೇಂದ್ರ ಸಿಂಗ್ ತೋಮರ್ ಮತ್ತು ಪೀಯೂಷ್ ಗೋಯಲ್ ಅವರು ಹೊಸ ಕೃಷಿ ಕಾನೂನುಗಳು ಮತ್ತು ರೈತರ ಬೇಡಿಕೆಗಳ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ. ಅದನ್ನು ಕೇಳಬೇಕು’ ಎಂದು ಉಭಯ ಸಚಿವರ ಪತ್ರಿಕಾಗೋಷ್ಠಿಯ ವಿಡಿಯೊ ಲಿಂಕ್ ಸಹಿತ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಪ್ರತಿಭಟನೆ 16ನೇ ದಿನಕ್ಕೆ: ಪರಿಹಾರ ದೇವರಿಗೆ ಗೊತ್ತು –ರೈತ ಮುಖಂಡ

ಪ್ರತಿಭಟನೆ ಬಿಟ್ಟು ಮುಂದಿನ ಸುತ್ತಿನ ಮಾತುಕತೆಗೆ ಬರುವಂತೆ ಉಭಯ ಸಚಿವರು ರೈತರಿಗೆ ಮನವಿ ಮಾಡಿದ್ದಾರೆ.

‘ಪ್ರತಿಭಟನೆ ಕೈಬಿಟ್ಟು ಮಾತುಕತೆ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಮನವಿ ಮಾಡುತ್ತೇವೆ’ ಎಂದು ಇಬ್ಬರೂ ಸಚಿವರು ಕೇಳಿಕೊಂಡಿದ್ದಾರೆ.

ಕಾಯ್ದೆಗಳಿಗೆ ತಿದ್ದುಪಡಿ ತರುವ ಸರ್ಕಾರದ ಪ್ರಸ್ತಾವ ತಿರಸ್ಕರಿಸಿರುವ ರೈತರು ರದ್ದುಪಡಿಸಬೇಕೆಂದು ಪಟ್ಟುಹಿಡಿದಿದ್ದಾರೆ. ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿಯೂ ದೇಶದಾದ್ಯಂತ ರೈಲು ತಡೆ ಮಾಡುವುದಾಗಿಯೂ ಎಚ್ಚರಿಕೆಯನ್ನೂ ನೀಡಿದ್ದಾರೆ.

ಪಂಜಾಬ್‌ನಲ್ಲಿ ಈಗಾಗಲೇ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.