ಔರಂಗಾಬಾದ್: 'ದೇಶದ ಯುವಜನತೆ ಸಾಮಾಜಿಕ ಮಾಧ್ಯಮಗಳಲ್ಲಿ ತಲ್ಲೀನರಾಗಲು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಾರೆ. ಇದರಿಂದ ಯುವಜನತೆ ಹೆಚ್ಚಿನ ಪ್ರಶ್ನೆಗಳನ್ನು ಎತ್ತುವುದಿಲ್ಲ' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಮಂಗಳವಾರ) ಹೇಳಿದ್ದಾರೆ.

ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್, 'ಸಾಮಾಜಿಕ ಮಾಧ್ಯಮ 'ಚಟ'ವನ್ನು ಪ್ರಧಾನಿ ಪ್ರೋತ್ಸಾಹಿಸುತ್ತಿದ್ದಾರೆ. ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಜನರ ಸಮಸ್ಯೆಗಳಿಂದ ವಿಚಲಿತರಾಗಲು ಯುವಜನರು ಸಾಮಾಜಿಕ ಮಾಧ್ಯಮಗಳಲ್ಲಿ ನಿರತರಾಗಲು ಬಯಸುತ್ತಾರೆ' ಎಂದು ಆರೋಪಿಸಿದ್ದಾರೆ.

'ಮೋದಿ ನಿಮ್ಮನ್ನು ರೀಲ್ಸ್, ಇನ್ಸ್ಟಾಗ್ರಾಂ, ಫೇಸ್ಬುಕ್ ವ್ಯಸನಿಯನ್ನಾಗಿ ಮಾಡಲು ಬಯಸುತ್ತಾರೆ. ಇದು 21ನೇ ಶತಮಾನದ ಚಟವಾಗಿದೆ. ಯುವಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಯಸುತ್ತಾರೆ. ಅಲ್ಲದೆ ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಕ್ಷೇತ್ರಗಳ ಸಮಸ್ಯೆಗಳಿಗೆ ತಮ್ಮ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡದಿರಲು ಬಯಸುತ್ತಾರೆ' ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮತಕಳ್ಳತನ...

'ಬಿಹಾರದಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ. ಇಲ್ಲದಿದ್ದರೆ ಬಿಹಾರದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅವರಿಗೆ ತಿಳಿದಿದೆ' ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

'ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ 'ಇಂಡಿಯಾ' ಮೈತ್ರಿಯು ಹಿಂದುಳಿದ, ದಲಿತರ ಸರ್ಕಾರವಾಗಿ ಕೆಲಸ ಮಾಡಲಿದೆ. ಬಿಹಾರವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ. 'ಮೇಡ್ ಇನ್ ಬಿಹಾರ'ದ ಮೊಬೈಲ್ ಫೋನ್, ಬಟ್ಟೆಬರೆ ನೋಡಿ ಚೀನಾ ಕೂಡಾ ಗಮನಿಸುವಂತೆ ಮಾಡುತ್ತೇವೆ' ಎಂದು ಭರವಸೆ ನೀಡಿದ್ದಾರೆ.

ನಳಂದದಲ್ಲಿ ಅತ್ಯಾಧುನಿಕ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ರಾಹುಲ್ ವಾಗ್ದಾನ ನೀಡಿದ್ದಾರೆ.

ರಾಜ್ಯದ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್, 'ಮುಖ್ಯಮಂತ್ರಿ ನಿತೀಶ್ ಕುಮಾರ್ ಕೇಂದ್ರದಲ್ಲಿ ಕುಳಿತವರ ನಿರ್ದೇಶನದಂತೆ ಕೆಲಸ ಮಾಡುತ್ತಾರೆ' ಎಂದು ಆಪಾದಿಸಿದ್ದಾರೆ.
.Bihar Election |NDA ಅಧಿಕಾರಕ್ಕೆ ಬಂದರೆ ರಕ್ಷಣಾ ಕಾರಿಡಾರ್ ಸ್ಥಾಪನೆ: ಅಮಿತ್ ಶಾ.Bihar Elections: ಸರ್ಕಾರ ರಚನೆ ಖಚಿತ, ಪ್ರಮಾಣವಚನ ದಿನಾಂಕ ಘೋಷಿಸಿದ ತೇಜಸ್ವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.