ಈ ಹಿನ್ನೆಲೆಯಲ್ಲಿ ಅಂದು ಗುಜರಾತ್ಗೆ ಭೇಟಿ ನೀಡಲಿರುವ ಮೋದಿ ಅವರು, ಹೀರಾಬೆನ್ ಅವರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಲಿದ್ದಾರೆ. ಆ ಬಳಿಕ ವಡೋದರಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀರಾಬೆನ್ ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಪ್ರಾಪ್ತವಾಗಲಿ ಎಂದು ಹಾರೈಸಿ ಮೋದಿ ಅವರ ಹುಟ್ಟೂರು ವಡನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅವರ ಕುಟುಂಬಸ್ಥರು ಹೇಳಿದ್ದಾರೆ.