ನವದೆಹಲಿ: 'ಮನ್ ಕೀ ಬಾತ್' ರೇಡಿಯೋ ಕಾರ್ಯಕ್ರಮದ 113ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ , ಅನೇಕ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ.
ವಿಕಸಿತ ಭಾರತ...
'ವಿಕಸಿತ ಭಾರತ'ದ ಅಡಿಪಾಯವನ್ನು ಬಲಗೊಳಿಸುವುದರತ್ತ 21ನೇ ಶತಮಾನದಲ್ಲಿ ದೇಶದಲ್ಲಿ ಅನೇಕ ವಿಚಾರಗಳು ನಡೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ಯುವಜನತೆಗೆ ರಾಜಕೀಯಕ್ಕೆ ಪ್ರವೇಶಿಸಲು ಕರೆ...
ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಅಭಿವೃದ್ಧಿ ಹೊಂದಿದ ಭಾರತ ಹಾಗೂ ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಒಂದು ಲಕ್ಷದಷ್ಟು ಯುವಜನತೆ ರಾಜಕೀಯಕ್ಕೆ ಪ್ರವೇಶಿಸಲು ಕರೆ ನೀಡಿದ್ದೆ. ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ದೊರಕುತ್ತಿದೆ ಎಂದು ಅವರು ಹೇಳಿದ್ದಾರೆ.
ದೊಡ್ಡ ಸಂಖ್ಯೆಯಲ್ಲಿ ಯುವಜನತೆ ರಾಜಕೀಯಕ್ಕೆ ಸೇರಲು ಸಿದ್ಧರಿದ್ದಾರೆ. ಅವರಿಗೆ ಸರಿಯಾದ ಅವಕಾಶ ಹಾಗೂ ಮಾರ್ಗದರ್ಶನದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಸ್ವಾತಂತ್ರ್ಯ ಚಳವಳಿಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದವರು, ಸಮಾಜದ ಎಲ್ಲ ವರ್ಗದ ಅಸಂಖ್ಯಾತ ಜನರು ಭಾಗವಹಿಸಿದ್ದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮೆಲ್ಲವನ್ನು ಅರ್ಪಿಸಿಕೊಂಡರು. ವಿಕಸಿತ ಭಾರತದ ಕಲ್ಪನೆಯನ್ನು ಮುಟ್ಟಲು ನಾವು ಮಗದೊಮ್ಮೆ ಅದೇ ಮನೋಭಾವವನ್ನು ಪುನರುಜ್ಜೀವನಗೊಳಿಸಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬಾಹ್ಯಾಕಾಶ ಕ್ಷೇತ್ರದಲ್ಲಿ ಕ್ರಾಂತಿ...
ಭಾರತ ಚಂದ್ರನ ಮೇಲೆ ಕಾಲಿಟ್ಟ ಆಗಸ್ಟ್ 23ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗಿತ್ತು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ.
ಬಾಹ್ಯಾಕಾಶ ಸ್ಟಾರ್ಟ್‌ಅಪ್‌ಗಳನ್ನು ಮುನ್ನಡೆಸುತ್ತಿರುವ ಹಲವು ಯುವ ಉದ್ಯಮಿಗಳ ಕೆಲಸವನ್ನು ಪ್ರಧಾನಿ ಮೋದಿ ಉಲ್ಲೇಖ ಮಾಡಿದರು. ದೇಶದಲ್ಲಿ ಪ್ರಗತಿ ಕಾಣುತ್ತಿರುವ ಬಾಹ್ಯಾಕಾಶ ವ್ಯವಸ್ಥೆಯನ್ನು ಅವರು ಶ್ಲಾಘಿಸಿದರು.
ಬಾಹ್ಯಾಕಾಶ ಕ್ಷೇತ್ರದಲ್ಲಿನ ಗಮನಾರ್ಹ ಸುಧಾರಣೆಗಳಿಂದ ದೇಶದ ಯುವಜನತೆ ಹೆಚ್ಚಿನ ಪ್ರಯೋಜನ ಗಿಟ್ಟಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ 'ಮನ್ ಕೀ ಬಾತ್' ಇಲ್ಲಿ ಆಲಿಸಿರಿ...
Sharing this month's #MannKiBaat. Do tune in as we discuss diverse topics.https://t.co/foDjJSa309
— Narendra Modi (@narendramodi) August 25, 2024
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.