ಅಹಮದಾಬಾದ್: ದೇಶದ ನ್ಯಾಯಾಂಗ ವ್ಯವಸ್ಥೆಯು ಜನರ ಹಕ್ಕುಗಳನ್ನು ಕಾಪಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದ್ದಾರೆ.

ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಶ್ಲಾಘಿಸಿರುವ ನರೇಂದ್ರ ಮೋದಿ, ಜನರ ಹಕ್ಕುಗಳನ್ನು ರಕ್ಷಿಸುವಲ್ಲಿ, ವೈಯಕ್ತಿಕ ಸ್ವಾತಂತ್ರ್ಯ ಎತ್ತಿ ಹಿಡಿಯುವಲ್ಲಿ ಮತ್ತು ರಾಷ್ಟ್ರೀಯ ಹಿತಾಸಕ್ತಿಗೆ ಆದ್ಯತೆ ನೀಡಬೇಕಾದ ಸಂದರ್ಭಗಳಲ್ಲಿಯೂ ನ್ಯಾಯಾಂಗ ವ್ಯವಸ್ಥೆಯು ತನ್ನ ಕರ್ತವ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಪುದುಚೇರಿ: ಮೋದಿಯ ಕೊಲ್ಲುವುದಾಗಿ ಫೇಸ್‌ಬುಕ್ ಪೋಸ್ಟ್ ಮಾಡಿದ್ದ ವ್ಯಕ್ತಿಯ ಬಂಧನ

ವಿಡಿಯೊ ಕಾನ್ಫರೆನ್ಸ್ ಮೂಲಕವಿಶ್ವದಲ್ಲೇ ಅತಿ ಹೆಚ್ಚು ವಿಚಾರಣೆ...
ಇದೇ ಸಂದರ್ಭದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಕಾಲಘಟ್ಟದಲ್ಲಿವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸುಪ್ರೀಂ ಕೋರ್ಟ್ ವಿಶ್ವದಲ್ಲೇ ಅತಿ ಹೆಚ್ಚು ವಿಚಾರಣೆಗಳನ್ನು ನಡೆಸಿದೆ ಎಂದು ಪ್ರಧಾನಿ ಮೋದಿ ಮಾಹಿತಿ ಒದಗಿಸಿದರು.

60 ವರ್ಷಗಳನ್ನು ಪೂರ್ಣಗೊಳಿಸಿರುವ ಗುಜರಾತ್ ಹೈಕೋರ್ಟ್‌ನ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದ ಬಳಿಕ ನರೇಂದ್ರ ಮೋದಿ, ವರ್ಚ್ಯುವಲ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂವಿಧಾನವನ್ನು ಎತ್ತಿ ಹಿಡಿಯಲು ನಮ್ಮ ನ್ಯಾಯಾಂಗವು ದೃಢ ನಿಶ್ಚಯದಿಂದ ಕೆಲಸ ನಿರ್ವಹಿಸಿದೆ ಎಂಬುದನ್ನು ಪ್ರತಿಯೊಬ್ಬ ದೇಶ ನಿವಾಸಿಯೂ ಹೇಳಬಹುದು. ಸಕಾರಾತ್ಮಕ ವ್ಯಾಖ್ಯಾನದಿಂದ ನಮ್ಮ ನ್ಯಾಯಾಂಗವು ಸಂವಿಧಾನವನ್ನು ಬಲಪಡಿಸಿದೆ ಎಂದು ನರೇಂದ್ರ ಮೋದಿ ತಿಳಿಸಿದರು.

ಇದನ್ನೂ ಓದಿ:ಬೆಲೆ ಏರಿಕೆ: ‘ಮೋದಿ ಪಲಾವ್’ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್

ಕೋವಿಡ್-19 ಪಿಡುಗಿನ ಸಮಯದಲ್ಲಿ ನಮ್ಮ ನ್ಯಾಯಾಂಗವು ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿಶ್ವದಲ್ಲೇ ಅತಿ ಹೆಚ್ಚು ವಿಚಾರಣೆಗಳನ್ನು ನಡೆಸಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.