ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

91ನೇ ವಸಂತಕ್ಕೆ ಕಾಲಿಟ್ಟ ಮನಮೋಹನ್ ಸಿಂಗ್: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

Published 26 ಸೆಪ್ಟೆಂಬರ್ 2023, 5:36 IST
Last Updated 26 ಸೆಪ್ಟೆಂಬರ್ 2023, 5:36 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಇಂದು (ಮಂಗಳವಾರ) 91ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

‘ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಭಗವಂತ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ರಾಜಕೀಯದಲ್ಲಿ ಸರಳತೆ, ಘನತೆ ಮತ್ತು ಸೌಜನ್ಯಕ್ಕೆ ಅಪರೂಪದ ಉದಾಹರಣೆಯಾಗಿದ್ದಾರೆ. ದೇಶ ಕಂಡ ಅಪರೂಪದ ರಾಜನೀತಿಜ್ಞ, ಅವರ ಕಾರ್ಯಗಳು ಮಾತಿಗಿಂತ ಹೆಚ್ಚಾಗಿ ಮಾತನಾಡುತ್ತವೆ. ಅವರು ರಾಷ್ಟ್ರಕ್ಕೆ ನೀಡಿದ ಅಪಾರ ಕೊಡುಗೆಗಾಗಿ ನಾವು ಎಂದೆಂದಿಗೂ ಕೃತಜ್ಞರಾಗಿರುತ್ತೇವೆ. ಅವರಿಗೆ ಉತ್ತಮ ಆರೋಗ್ಯ, ಸಂತೋಷ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

‘ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸಮಗ್ರತೆ, ರಾಷ್ಟ್ರ ನಿರ್ಮಾಣ ಮತ್ತು ಜನಸಾಮಾನ್ಯರ ಆರ್ಥಿಕ ಉನ್ನತಿಗೆ ಅಚಲವಾದ ಬದ್ಧತೆ ನನಗೆ ಯಾವಾಗಲೂ ಸ್ಫೂರ್ತಿಯಾಗಿದೆ. ಅವರಿಗೆ ಭಗವಂತ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಡಾ.ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ 91 ವರ್ಷ ಅವರು ಯಾವಾಗಲೂ ಪಾಂಡಿತ್ಯ ಮತ್ತು ಕಲಿಕೆಯ ಅತ್ಯುತ್ತಮ ಸಂಕೇತವಾಗಿದ್ದಾರೆ. ಆದರೆ, ಅದಕ್ಕಿಂತ ಹೆಚ್ಚಾಗಿ ಅವರು ಯಾವ ಸ್ಥಾನದಲ್ಲಿದ್ದರೂ ಅನುಗ್ರಹ, ಸಮಚಿತ್ತತೆ, ನಮ್ರತೆ ಮತ್ತು ಘನತೆಯನ್ನು ಪ್ರತಿಪಾದಿಸಿದ್ದಾರೆ. ಇವು ಅವರ ಸಾರ್ವಜನಿಕ ಜೀವನದಲ್ಲಿ ಅತ್ಯಂತ ಅಪರೂಪದ ಗುಣಗಳಾಗಿವೆ. ರಾಷ್ಟ್ರಪತಿಗಳು ಮತ್ತು ಪ್ರಧಾನ ಮಂತ್ರಿಗಳು ಅವರನ್ನು ಗುರು ಎಂದು ಕರೆಯುವುದನ್ನು ನಾನು ಕೇಳಿದ್ದೇನೆ. ಅವರಿಗೆ ಸ್ವಯಂ ಜಾಹೀರಾತು ಅಗತ್ಯವಿಲ್ಲ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಅತ್ಯಂತ ಸಮರ್ಪಣೆ ಮತ್ತು ಬದ್ಧತೆಯಿಂದ ರಾಷ್ಟ್ರವನ್ನು ಮುನ್ನಡೆಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅವರಿಗೆ ಭಗವಂತ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT