ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Onam 2023: ಓಣಂ ಹಬ್ಬಕ್ಕೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ

Published 29 ಆಗಸ್ಟ್ 2023, 4:22 IST
Last Updated 29 ಆಗಸ್ಟ್ 2023, 4:22 IST
ಅಕ್ಷರ ಗಾತ್ರ

ನವದೆಹಲಿ: ಓಣಂ ಹಬ್ಬದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

‘ಕೇರಳದ ನಮ್ಮ ಸಹೋದರ ಸಹೋದರಿಯರಿಗೆ ಓಣಂ ಹಬ್ಬದ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ಸುಗ್ಗಿಯ ಹಬ್ಬವು ಸಮೃದ್ಧಿ ಮತ್ತು ಎಲ್ಲರ ನಡುವೆ ಸಾಮರಸ್ಯದ ಮನೋಭಾವವನ್ನು ಮೂಡಿಸಲಿ. ಜತೆಗೆ, ಅಸಂಖ್ಯಾತ ವರದಾನಗಳನ್ನು ಕಲ್ಪಿಸಿಕೊಟ್ಟಿರುವ ಪ್ರಕೃತಿ ಮಾತೆಗೆ ಕೃತಜ್ಞತೆ ಸಲ್ಲಿಸೋಣ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಶುಭಾಶಯ ತಿಳಿಸಿದ್ದಾರೆ.

ಎಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ನಿಮ್ಮ ಜೀವನವು ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಕೂಡಿರಲಿ. ಕಳೆದ ಹಲವು ವರ್ಷಗಳಿಂದ ಓಣಂ ಜಾಗತಿಕ ಹಬ್ಬವಾಗಿದ್ದು, ಕೇರಳದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಕೇರಳದಲ್ಲಿರುವ ಸಹೋದರ ಸಹೋದರಿಯರಿಗೆ ಓಣಂ ಹಬ್ಬದ ಶುಭಾಶಯಗಳು. ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ಕರುಣಿಸುವುದರ ಜತೆಗೆ ಏಕತೆ ಮತ್ತು ಒಗ್ಗಟ್ಟಿನ ಸಾರವನ್ನು ಹರಡಲಿ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT