ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

G20 Summit | ನವೆಂಬರ್​ನಲ್ಲಿ ವರ್ಚ್ಯುವಲ್ ಸಭೆ- ಪ್ರಧಾನಿ ನರೇಂದ್ರ ಮೋದಿ

Published 10 ಸೆಪ್ಟೆಂಬರ್ 2023, 11:01 IST
Last Updated 10 ಸೆಪ್ಟೆಂಬರ್ 2023, 11:01 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಅಧ್ಯಕ್ಷತೆವಹಿಸಿದ್ದ ಎರಡು ದಿನಗಳ ಜಿ20 ಶೃಂಗಸಭೆ ಮುಕ್ತಾಯಗೊಂಡಿದ್ದು, ನವೆಂಬರ್​ನಲ್ಲಿ ವರ್ಚ್ಯುವಲ್ ಸಭೆ ನಡೆಯಲಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 

ಮುಂದಿನ ವರ್ಷ ಬ್ರೆಜಿಲ್​ನಲ್ಲಿ ಜಿ20 ಸಮ್ಮೇಳನ ಆಯೋಜಿಸಲಾಗುವುದು. ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಅಧ್ಯಕ್ಷ ಲೂಯಿಸ್‌ ಇನಾಸಿಯೊ ಲುಲಾ ಡ ಸಿಲ್ವ ಅವರಿಗೆ ಹಸ್ತಾಂತರಿಸಿದರು. 

ಬಳಿಕ ಮಾತನಾಡಿದ ಪ್ರಧಾನಿ ಮೋದಿ ಬರುವ ನವೆಂಬರ್‌ ತಿಂಗಳಲ್ಲಿ ವರ್ಚ್ಯುವಲ್ ಸಭೆ ನಡೆಯಲಿರುವುದಾಗಿ ತಿಳಿಸಿದರು. ನವೆಂಬರ್​ ಅಂತ್ಯದವರೆಗೆ ಅಧ್ಯಕ್ಷ ಸ್ಥಾನ ಭಾರತದೊಂದಿಗೆ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT