ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Narendra Modi 3.0: ಮೋದಿ ಸಂಪುಟದ ಮೊದಲ ಸಭೆ ಇಂದು ಸಂಜೆ 5ಕ್ಕೆ

Published 10 ಜೂನ್ 2024, 9:08 IST
Last Updated 10 ಜೂನ್ 2024, 9:08 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಸಚಿವ ಸಂಪುಟದ ಮೊದಲ ಸಭೆ ಇಂದು ಸಂಜೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ಸಂಜೆ 5ಕ್ಕೆ ಸಭೆ ನಡೆಯಲಿದ್ದು, ಹೊಸದಾಗಿ ಸಂಪುಟ ಸೇರಿರುವವರೆಲ್ಲ ಹಾಜರಾಗಲಿದ್ದಾರೆ.

ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಭಾನುವಾರ ರಾತ್ರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದರೊಂದಿಗೆ ಅವರು ಮಾಜಿ ಪ್ರಧಾನಿ, ದಿವಂಗತ ಜವಾಹರಲಾಲ್‌ ನೆಹರೂ ಅವರು 'ಹ್ಯಾಟ್ರಿಕ್‌' ಸಾಧನೆಯನ್ನು ಸರಿಗಟ್ಟಿದ್ದಾರೆ.

ಏಳು ರಾಜ್ಯಗಳ ಮಾಜಿ ಮುಖ್ಯಮಂತ್ರಿಗಳೂ ಸೇರಿದಂತೆ ಒಟ್ಟು 72 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

ನಡ್ಡಾ ಔತಣಕೂಟ

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನೂತನ ಸಚಿವರಿಗೆ ಔತಣಕೂಟ ಏರ್ಪಡಿಸಲಿದ್ದಾರೆ ಎಂದೂ ಹೇಳಲಾಗಿದೆ.

ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ಸಚಿವ ಸಂಪುಟದಲ್ಲಿದ್ದ ನಡ್ಡಾ, 2019ರಲ್ಲಿ ಪಕ್ಷದ ಹೊಣೆ ಹೊತ್ತು ಸಂಪುಟದಿಂದ ಹೊರಗುಳಿದಿದ್ದರು. ಪಕ್ಷದ ಅಧ್ಯಕ್ಷರಾಗಿ ಅವರ ಅವಧಿ ಇದೇ ತಿಂಗಳು ಮುಕ್ತಾಯವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT