ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಕ್ಕಿಂ ಮುಖ್ಯಮಂತ್ರಿ ತಮಾಂಗ್‌ಗೆ ಪ್ರಧಾನಿ ಮೋದಿ ಅಭಿನಂದನೆ

Published 10 ಜೂನ್ 2024, 12:36 IST
Last Updated 10 ಜೂನ್ 2024, 12:36 IST
ಅಕ್ಷರ ಗಾತ್ರ

ನವದೆಹಲಿ: ಸಿಕ್ಕಿಂ ಮುಖ್ಯಮಂತ್ರಿ ಇಂದು ಪ್ರಮಾಣವಚನ ಸ್ವೀಕರಿಸಿದ ಪ್ರೇಮ್‌ ಸಿಂಗ್‌ ತಮಾಂಗ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಎಕ್ಸ್‌ / ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, 'ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರೇಮ್‌ ಸಿಂಗ್‌ ತಮಾಂಗ್‌ ಅವರಿಗೆ ಅಭಿನಂದನೆಗಳು. ಅಧಿಕಾರದ ಅವಧಿ ಉತ್ತಮವಾಗಿರಲಿ ಎಂದು ಹಾರೈಸುತ್ತೇನೆ. ಸಿಕ್ಕಿಂ ಪ್ರಗತಿಗಾಗಿ, ಅವರ (ತಮಾಂಗ್‌) ಜೊತೆ ಕೆಲಸ ಮಾಡಲು ಎದುರುನೋಡುತ್ತಿದ್ದೇನೆ' ಎಂದು ಮೋದಿ ತಿಳಿಸಿದ್ದಾರೆ.

56 ವರ್ಷದ ತಮಾಂಗ್‌, ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ತಮಾಂಗ್‌ ಅವರ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಪಕ್ಷ ಭಾರಿ ಬಹುಮತ ಸಾಧಿಸಿದೆ. ಇಲ್ಲಿನ 32 ವಿಧಾನಸಭಾ ಕ್ಷೇತ್ರಗಳ ಪೈಕಿ 31ರಲ್ಲಿ ಗೆದ್ದು ಅಧಿಕಾರದಲ್ಲಿ ಮುಂದುವರಿದಿದೆ.

1994ರಿಂದ 2019ರ ವರೆಗೆ (25 ವರ್ಷ) ಅಧಿಕಾರದಲ್ಲಿದ್ದ, ಸಿಕ್ಕಿಂ ಡೆಮಾಕ್ರಟಿಕ್‌ ಫ್ರಂಟ್‌ (ಎಸ್‌ಡಿಎಫ್) ಕೇವಲ 1 ಸ್ಥಾನವನ್ನಷ್ಟೇ ಗೆದ್ದಿದೆ.

ಇಲ್ಲಿನ ಏಕೈಕ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಿರುವ ಎಸ್‌ಕೆಎಂ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ದೆಹಲಿಯಲ್ಲಿ ಇಂದು ರಾತ್ರಿ 7ಕ್ಕೆ ಆರಂಭವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT