ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಶುಕ್ರವಾರ) 81ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಹಾರೈಸಿದ್ದಾರೆ.
‘ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮಗೆ ದೇವರು ದೀರ್ಘಾಯುಷ್ಯ ಮತ್ತು ಆರೋಗ್ಯಕರ ಜೀವನವನ್ನು ಕರುಣಿಸಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
‘ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆ ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ. ನಿಮಗೆ ಹೆಚ್ಚಿನ ಪ್ರೀತಿ, ಉತ್ತಮ ಆರೋಗ್ಯ ದೊರೆಯಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
‘ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಬುದ್ಧಿವಂತಿಕೆ ಮತ್ತು ಅನುಭವವು ದೇಶದಾದ್ಯಂತ ಎಲ್ಲಾ ಕಾಂಗ್ರೆಸ್ಸಿಗರು ಮತ್ತು ಮಹಿಳೆಯರಿಗೆ ಶಕ್ತಿಯ ಮೂಲವಾಗಿದೆ. ನಿಮಗೆ ಉತ್ತಮ ಆರೋಗ್ಯ, ಸಂತೋಷ ದೊರೆಯಲಿ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
‘ಕರ್ನಾಟಕದ ಹೆಮ್ಮೆಯ ಪುತ್ರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ನಾಯಕತ್ವ, ಬದ್ಧತೆ ಮತ್ತು ಸಮರ್ಪಣೆಯೊಂದಿಗೆ ನಮ್ಮೆಲ್ಲರಿಗೂ ಸ್ಫೂರ್ತಿ ನೀಡುವುದನ್ನು ಮುಂದುವರಿಸಿ. ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷ ದೊರೆಯಲಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.