ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲಾಪುರ: ಫಲಾನುಭವಿಗಳಿಗೆ 15,204 ಮನೆಗಳನ್ನು ಹಸ್ತಾಂತರಿಸಿದ ಪ್ರಧಾನಿ ಮೋದಿ

Published 19 ಜನವರಿ 2024, 6:41 IST
Last Updated 19 ಜನವರಿ 2024, 6:41 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಸೋಲಾಪುರದಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ (ಪಿಎಂವೈ–ಯು) ನಿರ್ಮಿಸಲಾದ 15,204 ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಸೋಲಾಪುರದಲ್ಲಿ ಪಿಎಂವೈ–ಯು ಅಡಿಯಲ್ಲಿ 90,000ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಯೋಜನೆಯ ಭಾಗವಾಗಿ ಸೋಲಾಪುರದ ರಾಯನಗರ ಹೌಸಿಂಗ್ ಸೊಸೈಟಿಯ 15,204 ಮನೆಗಳನ್ನು ಮೋದಿ ಅವರು ಲೋಕಾರ್ಪಣೆಗೊಳಿಸಿದರು.

ಇದೇ ವೇಳೆ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ ಶಿಂದೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್, ಅಜಿತ್ ಪವಾರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

‘ಅಮೃತ್‌ 2.0’ ಯೋಜನೆ ಉದ್ಘಾಟಿಸಿದ ಮೋದಿ

ಪಟ್ಟಣದಲ್ಲಿನ ಪ್ರತಿಮನೆಗೂ ನಲ್ಲಿ ನೀರು ಒದಗಿಸುವ ಕೇಂದ್ರ ಸರ್ಕಾರದ ‘ಅಮೃತ್ 2.0’ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ‘ಅಮೃತ್‌ 2.0’ ಯೋಜನೆಯನ್ನು 2021ರ ಅಕ್ಟೋಬರ್ 2ರಂದು ಪ್ರಕಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT