ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯ ಧಾಮ ರೈಲು ನಿಲ್ದಾಣ ಲೋಕಾರ್ಪಣೆ, 8 ರೈಲುಗಳಿಗೆ ಚಾಲನೆ ನೀಡಿದ ಪಿಎಂ ಮೋದಿ

Published 30 ಡಿಸೆಂಬರ್ 2023, 7:38 IST
Last Updated 30 ಡಿಸೆಂಬರ್ 2023, 7:38 IST
ಅಕ್ಷರ ಗಾತ್ರ

ಅಯೋಧ್ಯೆ: ಮರುಅಭಿವೃದ್ಧಿಗೊಂಡಿರುವ ಅಯೋಧ್ಯ ಧಾಮ ರೈಲು ನಿಲ್ದಾಣವನ್ನು ಇಂದು (ಶನಿವಾರ) ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಎರಡು ಅಮೃತ ಭಾರತ್‌ ಮತ್ತು ಆರು ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡಿದರು.

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ಮತ್ತು ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಅವರು ಈ ವೇಳೆ ಉಪಸ್ಥಿತರಿದ್ದರು.

ರೈಲು ನಿಲ್ದಾಣ ಉದ್ಘಾಟನೆಗೂ ಮುನ್ನ ಪ್ರಧಾನಿ ಅವರು ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದವರೆಗೆ ರೋಡ್‌ ಶೋ ನಡೆಸಿದರು. ರಸ್ತೆಯುದ್ದಕ್ಕೂ ನೆರೆದ ಸಾವಿರಾರು ಜನರು ಅವರಿಗೆ ಸ್ವಾಗತ ಕೋರಿದರು.

ಅಯೋಧ್ಯೆಯಲ್ಲಿ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ಹೊಸದಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದ ಉದ್ಘಾಟನೆ ಸೇರಿದಂತೆ ರಾಜ್ಯದಾದ್ಯಂತ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT