ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ: ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Published 19 ಫೆಬ್ರುವರಿ 2024, 6:12 IST
Last Updated 19 ಫೆಬ್ರುವರಿ 2024, 6:12 IST
ಅಕ್ಷರ ಗಾತ್ರ

ಸಂಭಾಲ್‌ (ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. 

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕಲ್ಕಿ ಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಅವರ ಸಮ್ಮುಖದಲ್ಲಿ ಪೂಜಾ ವಿಧಿ ವಿಧಾನಗಳನ್ನು ಪೂರೈಸಿ ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ ದೇವಾಲಯದ ಮಾದರಿಯನ್ನು ಅನಾವರಣಗೊಳಿಸಿದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಇಂದು ಸಂತರ ಶ್ರದ್ಧಾಭಕ್ತಿ ಹಾಗೂ ಸಾರ್ವಜನಿಕರ ಉತ್ಸಾಹದಿಂದ ಮತ್ತೊಂದು ಪುಣ್ಯಕ್ಷೇತ್ರದ ಶಂಕುಸ್ಥಾಪನೆ ನಡೆಯುತ್ತಿದೆ. ಆಚಾರ್ಯರು ಮತ್ತು ಸಂತರ ಸಮ್ಮುಖದಲ್ಲಿ ಭವ್ಯವಾದ ಕಲ್ಕಿ ಧಾಮದ ಶಂಕುಸ್ಥಾಪನೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಕಲ್ಕಿಧಾಮವು ಭಾರತೀಯ ನಂಬಿಕೆಯ ಮತ್ತೊಂದು ಮಹಾನ್ ಕೇಂದ್ರವಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸ ನನಗಿದೆ’ ಎಂದರು

ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್, ದೇವಾಲಯ ನಿರ್ಮಾಣದ ಹೊಣೆ ಹೊತ್ತುಕೊಂಡಿದೆ. ಶಿಲಾನ್ಯಾಸ ಕಾರ್ಯಕ್ರಮದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ ಧರ್ಮಗುರುಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT