ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

3 ಕೋಟಿ ಮನೆ ನಿರ್ಮಾಣಕ್ಕೆ ನೆರವು; ಮೋದಿ ಸಂಪುಟದ ಮೊದಲ ಸಭೆಯಲ್ಲಿ ತೀರ್ಮಾನ

Published 10 ಜೂನ್ 2024, 13:56 IST
Last Updated 10 ಜೂನ್ 2024, 13:56 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲು ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ಕೇಂದ್ರ ಸಂಪುಟ ಸಭೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ದೇಶದ ಪ್ರಧಾನಿಯಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.

ಪಿಎಂಎವೈ ಯೋಜನೆಗೆ ಅರ್ಹ ಕುಟುಂಬಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪರಿಗಣಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ನೆರವು ನೀಡುವ ಪಿಎಂಎವೈ ಯೋಜನೆಯನ್ನು ಕೇಂದ್ರ ಸರ್ಕಾರವು 2015–16ರಲ್ಲಿ ಜಾರಿಗೊಳಿಸಿದೆ. ಈ ಯೋಜನೆ ಅಡಿಯಲ್ಲಿ, ಇದುವರೆಗೆ 4.21 ಕೋಟಿ ಮನೆಗಳು ನಿರ್ಮಾಣವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT