ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಮಿ ವಿವೇಕಾನಂದ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ

Published 31 ಮೇ 2024, 4:53 IST
Last Updated 31 ಮೇ 2024, 4:53 IST
ಅಕ್ಷರ ಗಾತ್ರ

ಚೆನ್ನೈ: ಲೋಕಸಭಾ ಚುನಾವಣೆ ‍ಪ್ರಚಾರ ಮುಗಿಸಿ ವಿಶ್ರಾಂತಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಿಗ್ಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಮೆಮೊರಿಯಲ್‌ನ ಧ್ಯಾನ ಮಂಟಪದಲ್ಲಿ ಧ್ಯಾನಾಸಕ್ತರಾದರು.

ಅವರು ಧ್ಯಾನ ಮಾಡುವ ವಿಡಿಯೊವನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದೆ.

ಖಾವಿ ಬಟ್ಟೆ ತೊಟ್ಟು, ಹಣೆಗೆ ವಿಭೂತಿ ಹಚ್ಚಿ, ಕೈಯಲ್ಲಿ ಜಪಮಣಿ ಹಿಡಿದುಕೊಂಡು ಸ್ವಾಮಿ ವಿವೇಕಾನಂದರ ಪ್ರತಿಮೆ ಮುಂದೆ ಪ್ರಧಾನಿ ಧ್ಯಾನ ಮಗ್ನರಾಗಿದ್ದಾರೆ.

ಇಲ್ಲಿಯೇ ಸ್ವಾಮಿ ವಿವೇಕಾನಂದ ಅವರು ಧ್ಯಾನ ಮಾಡಿದ್ದರು.

ಧ್ಯಾನಕ್ಕೂ ಮುನ್ನ ಕನ್ಯಾಕುಮಾರಿಯ ಭಗವತಿ ಅಮ್ಮನ್ ದೇಗುಲದಲ್ಲಿ ಅರ್ಘ್ಯ ಅರ್ಪಿಸಿದರು.

ಜೂನ್ ಒಂದರವರೆಗೆ ಅವರು ಇಲ್ಲಿ ಧ್ಯಾನ ಮಾಡಲಿದ್ದಾರೆ. 45 ಗಂಟೆಗಳ ದೀರ್ಘ ಧ್ಯಾನ ಅವರದ್ದಾಗಿರಲಿದೆ ಎಂದು ಬಿಜೆಪಿ ಬರೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT