ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Manmohan Singh Birthday: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

Published : 26 ಸೆಪ್ಟೆಂಬರ್ 2024, 7:02 IST
Last Updated : 26 ಸೆಪ್ಟೆಂಬರ್ 2024, 7:02 IST
ಫಾಲೋ ಮಾಡಿ
Comments

ನವದೆಹಲಿ: 92ನೇ ವರ್ಷಕ್ಕೆ ಕಾಲಿಸಿರುವ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

'ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತ ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಬರೆದುಕೊಂಡಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಹ ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

'ದೇಶದ ಭವಿಷ್ಯವನ್ನು ರೂಪಿಸುವಲ್ಲಿ ನಿಮ್ಮ ವಿನಯತೆ, ತಿಳುವಳಿಕೆ ಮತ್ತು ನಿಸ್ವಾರ್ಥ ಸೇವೆಯು ನನಗೆ ಹಾಗೂ ಲಕ್ಷಾಂತರ ಭಾರತೀಯರಿಗೆ ಸ್ಫೂರ್ತಿಯಾಗಿದೆ. ಯಾವಾಗಲೂ ಸಂತೋಷ ಹಾಗೂ ಆರೋಗ್ಯವಾಗಿರಿ' ಎಂದು ಹಾರೈಸಿದ್ದಾರೆ.

'ರಾಜಕೀಯ ರಂಗದಲ್ಲಿ ಸರಳತೆ, ಘನತೆ ಹಾಗೂ ಜಾಣ್ಮೆಯ ವ್ಯಕ್ತಿಯಾಗಿ ಮನಮೋಹನ್ ಸಿಂಗ್ ಗುರುತಿಸಿಕೊಂಡಿದ್ದಾರೆ. ಒಬ್ಬ ದಾರ್ಶನಿಕ ರಾಜಕಾರಣಿಯಾಗಿ ಮಾತುಗಳಿಗಿಂತ ಅವರ ಕೆಲಸ ಕಾರ್ಯಗಳೇ ಹೆಚ್ಚು ಪ್ರತಿಫಲಿಸಿದೆ. ದೇಶಕ್ಕೆ ಅವರು ನೀಡಿದ ಅಪಾರ ಕೊಡುಗೆಗಳಿಗೆ ನಾವು ಆಭಾರಿಯಾಗಿದ್ದೇವೆ. ಅವರಿಗೆ ಸಂತೋಷ, ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT