ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ (ಪಿಎಂ ಕಿಸಾನ್) 9ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು.
ಬಳಿಕ ಹಲವು ರೈತರ ಜತೆ ಸಂವಾದ ನಡೆಸಿದ ಪ್ರಧಾನಿಯವರು, ದೇಶವನ್ನು ಉದ್ದೇಶಿಸಿ ಮಾತನಾಡಿದರು.
ಕಿಸಾನ್ ಸಮ್ಮಾನ್ ಯೋಜನೆ 9ನೇ ಕಂತಿನಲ್ಲಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ ಸುಮಾರು ₹19,500 ಕೋಟಿ ವರ್ಗಾವಣೆಯಾಗಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನವಾಗಲಿದೆ ಎಂದು ಮೋದಿ ಹೇಳಿದರು.
₹ 1 ಲಕ್ಷ ಕೋಟಿಯ ಕೃಷಿ ಮೂಲಸೌಕರ್ಯ ನಿಧಿಯಿಂದ ಸಹಸ್ರಾರು ರೈತರಿಗೆ ಪ್ರಯೋಜನವಾಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.
9th instalment of #PMKisan is being released. Watch. https://t.co/adKzarnNaa
— Narendra Modi (@narendramodi) August 9, 2021
ಪ್ರಧಾನಿ ಭಾಷಣದ ಮುಖ್ಯಾಂಶಗಳು...
* ಈ ವರ್ಷ ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಿದೆ. ಇದು ಮಹತ್ವದ ಮೈಲಿಗಲ್ಲಾಗಿದ್ದು ನಮಗೆ ಹೆಮ್ಮೆಯ ವಿಷಯವಾಗಿದೆ. ಮಾತ್ರವಲ್ಲದೆ ಹೊಸ ನಿರ್ಣಯಗಳು ಮತ್ತು ಗುರಿಗಳಿಗೆ ತೆರೆದುಕೊಳ್ಳುವ ಸಂದರ್ಭವಾಗಿದೆ. ಮುಂದಿನ 25 ವರ್ಷಗಳಲ್ಲಿ ಭಾರತ ಯಾವ ಸ್ಥಾನದಲ್ಲಿರಬೇಕು ಎಂಬ ಬಗ್ಗೆ ಈ ಸಂದರ್ಭದಲ್ಲಿ ನಾವು ನಿರ್ಧಾರ ಕೈಗೊಳ್ಳಬೇಕು.
* ಸ್ವಾತಂತ್ರ್ಯ ದೊರೆತು 100 ವರ್ಷಗಳಾಗುವ ಸಂದರ್ಭದಲ್ಲಿ, 2047ರಲ್ಲಿ ಭಾರತವು ಯಾವ ಸ್ಥಾನದಲ್ಲಿರಬೇಕು ಎಂಬುದನ್ನು ನಿರ್ಧರಿಸಬೇಕು. ಇದನ್ನು ನಿರ್ಧರಿಸುವಲ್ಲಿ ನಮ್ಮ ಕೃಷಿ, ಗ್ರಾಮಗಳು ಮತ್ತು ರೈತರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೃಷಿಗೆ ಅಂತಹ ದಿಕ್ಕನ್ನು ನೀಡುವ ಸಮಯ ಇದಾಗಿದೆ. ಇದರಿಂದ ಹೊಸ ಸವಾಲುಗಳನ್ನು ಎದುರಿಸಲು ಮತ್ತು ಹೊಸ ಅವಕಾಶಗಳ ಲಾಭ ಪಡೆಯಲು ಸಾಧ್ಯವಾಗುತ್ತದೆ.
* ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ನಮ್ಮ ರೈತರು ಒಗ್ಗಟ್ಟು ಪ್ರದರ್ಶಿಸಿರುವುದನ್ನು ನಾವು ನೋಡಿದ್ದೇವೆ. ರೈತರು ಕೃಷಿ ಉತ್ಪನ್ನಗಳನ್ನು ದಾಖಲೆಯ ಪ್ರಮಾಣದಲ್ಲಿ ಬೆಳೆದಿದ್ದಾರೆ. ಸರ್ಕಾರವೂ ರೈತರ ಕಷ್ಟಗಳನ್ನು ಆದಷ್ಟು ಕಡಿಮೆ ಮಾಡಲು ಯತ್ನಿಸಿದೆ. ಬಿತ್ತನೆ ಬೀಜಗಳು, ರಸಗೊಬ್ಬರ ಒದಗಿಸುವ ಮೂಲಕ ಹಾಗೂ ರೈತರು ಬೆಳೆದ ಬೆಳೆಗೆ ಮಾರುಕಟ್ಟೆ ಒದಗಿಸುವ ಮೂಲಕ ಅವರಿಗೆ ನೆರವಾಗಲು ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಿದೆ.
*ಸರ್ಕಾರವು ಕನಿಷ್ಠ ಬೆಂಬಲ ಬೆಲೆಯೊಂದಿಗೆ ರೈತರಿಂದ ಅತಿಹೆಚ್ಚು ಕೃಷಿ ಉತ್ಪನ್ನ ಖರೀದಿಸಿದೆ. ಭತ್ತ ಬೆಳೆಯುವ ರೈತರ ಬ್ಯಾಂಕ್ ಖಾತೆಗಳಿಗೆ ₹1.70 ಲಕ್ಷ ಕೋಟಿ ನೇರ ವರ್ಗಾವಣೆಯಾಗಿದೆ. ಗೋಧಿ ಬೆಳೆಯುವ ರೈತರ ಖಾತೆಗಳಿಗೆ ₹85 ಸಾವಿರ ಕೋಟಿ ನೇರ ವರ್ಗಾವಣೆಯಾಗಿದೆ.
An amount of over ₹19,500 crores is transferred to nearly 10 crore farmers of the country. This will largely benefit the small and marginal farmers.
— PIB India (@PIB_India) August 9, 2021
The Agri Infrastructure Fund of ₹1 lakh crore is also benefiting thousands of farmer organizations - PM @narendramodi #PMKisan pic.twitter.com/owFvEDmTmg
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.