ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಇಪಿ ಅನುಷ್ಠಾನ ಕುರಿತು ಸಭೆ: ಹೈಬ್ರಿಡ್ ಕಲಿಕೆಗೆ ಒತ್ತು ನೀಡಲು ಮೋದಿ ಕರೆ

Last Updated 8 ಮೇ 2022, 2:23 IST
ಅಕ್ಷರ ಗಾತ್ರ

ನವದೆಹಲಿ: ಶಾಲಾ ಮಕ್ಕಳು ಅತಿಯಾಗಿ ತಂತ್ರಜ್ಞಾನಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸುವುದಕ್ಕಾಗಿ ಆನ್‌ಲೈನ್ ಮತ್ತು ಆಫ್‌ಲೈನ್‌ ಎರಡೂ ಒಳಗೊಂಡಿರುವ ಹೈಬ್ರಿಡ್ ಮಾದರಿಯ ಕಲಿಕೆಗೆ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನಕ್ಕೆ ಸಂಬಂಧಿಸಿದ ಪರಾಮರ್ಶೆಗಾಗಿ ಶನಿವಾರ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಶಿಕ್ಷಣದ ಲಭ್ಯತೆ, ಸಮಾನತೆ, ಒಳಗೊಳ್ಳುವಿಕೆ ಮತ್ತು ಗುಣಮಟ್ಟದ ಉದ್ದೇಶದೊಂದಿಗೆ ಈ ನೀತಿಯನ್ನು ರೂಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿರುವ ಮಕ್ಕಳ ಕುರಿತ ದತ್ತಾಂಶಗಳು ಅವರು ಶಾಲೆಗೆ ದಾಖಲಾಗುತ್ತಿದ್ದಂತೆ ಅಲ್ಲಿಯೂ ಲಭ್ಯವಾಗುವಂತೆ ಸಂಯೋಜಿಸಿರಬೇಕು ಎಂದು ಮೋದಿ ಹೇಳಿದ್ದಾರೆ.

ವಿದ್ಯಾರ್ಥಿಗಳಲ್ಲಿ ಪರಿಕಲ್ಪನಾ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಆಟಿಕೆಗಳ ಬಳಕೆಗೆ ಒತ್ತು ನೀಡಬೇಕು ಎಂದು ಅವರು ಹೇಳಿದ್ದಾರೆ. ವಿಜ್ಞಾನ ಪ್ರಯೋಗಾಲಯಗಳನ್ನು ಹೊಂದಿರುವ ಸೆಕೆಂಡರಿ ಸ್ಕೂಲ್‌ಗಳು ಆಯಾ ಪ್ರದೇಶದ ರೈತರೊಂದಿಗೆ ತೊಡಗಿಸಿಕೊಂಡು ಮಣ್ಣು ಪರೀಕ್ಷೆ ನಡೆಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT