ನವದೆಹಲಿ: ಉಕ್ರೇನ್‌ನಿಂದ ಮರಳಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಕ್ರೇನ್ ಪ್ರವಾಸ ಬಗೆಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಮೋದಿ, ‘ಉಕ್ರೇನ್ ಭೇಟಿ ವೇಳೆ ನಡೆಸಿದ ರಷ್ಯಾ– ಉಕ್ರೇನ್ ಸಂಘರ್ಷದ ಅವಲೋಕನ, ದೃಷ್ಟಿಕೋನದ ಬಗ್ಗೆ ಮಾಹಿತಿಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಹಂಚಿಕೊಳ್ಳಲಾಯಿತು. ಈ ಹಿಂದೆ ಹೇಳಿದಂತೆ ಸಂಘರ್ಷದ ಅಂತ್ಯಕ್ಕೆ ಶಾಂತಿಯುತ ಪರಿಹಾರವನ್ನು ಬೆಂಬಲಿಸಲು ಭಾರತ ಬದ್ಧವಾಗಿದೆ ಎಂದು ಪುನರುಚ್ಚರಿಸಿರುವುದಾಗಿ ಬರೆದುಕೊಂಡಿದ್ದಾರೆ.
ಇದೇ ವೇಳೆ ಉಭಯ ನಾಯಕರು ಎರಡು ದೇಶಗಳ ವಿಶೇಷ ಹಾಗೂ ಕಾರ್ಯತಂತ್ರದ ಸಹಭಾಗಿತ್ವದ ಬಗ್ಗೆ ಚರ್ಚೆ ನಡೆಸಿದ್ದಾರೆ.
ಉಕ್ರೇನ್ ಭೇಟಿಯ ಬಗ್ಗೆ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೂ ಮಾತುಕತೆ ನಡೆಸಿದ್ದು, ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಭಾರತ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.