ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋರ್ಟ್ ಬ್ಲೇರ್‌: ವೀರ ಸಾವರ್ಕರ್ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟಿಸಲಿರುವ ಮೋದಿ

Published 17 ಜುಲೈ 2023, 7:34 IST
Last Updated 17 ಜುಲೈ 2023, 7:34 IST
ಅಕ್ಷರ ಗಾತ್ರ

ನವದೆಹಲಿ: ಪೋರ್ಟ್ ಬ್ಲೇರ್‌ನಲ್ಲಿರುವ ವೀರ ಸಾವರ್ಕರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಮಂಗಳವಾರ) ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ.

ಸುಮಾರು ₹710 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಸೌಲಭ್ಯವು ಕೇಂದ್ರಾಡಳಿತ ಪ್ರದೇಶವಾದ ದ್ವೀಪಕ್ಕೆ ಸಂಪರ್ಕವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

ಟರ್ಮಿನಲ್ ಕಟ್ಟಡವನ್ನು ಸುಮಾರು 40,800 ಚದರ ಮೀಟರ್‌ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ. ವಾರ್ಷಿಕವಾಗಿ ಸುಮಾರು 50 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ.

₹80 ಕೋಟಿ ವೆಚ್ಚದಲ್ಲಿ ಎರಡು ಬೋಯಿಂಗ್-767-400 ಮತ್ತು ಎರಡು ಏರ್‌ಬಸ್ -321 ಮಾದರಿಯ ವಿಮಾನಗಳಿಗೆ ಸೂಕ್ತವಾದ ರನ್‌ವೇ ಅನ್ನು ಸಹ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ಒಂದೇ ಬಾರಿಗೆ 10 ವಿಮಾನಗಳನ್ನು ನಿಲ್ಲಿಸಬಹುದಾಗಿದೆ ಎಂದು ಪಿಎಂಒ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT