ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ: ₹91 ಸಾವಿರ ಕೋಟಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಿರುವ ಮೋದಿ

Published 14 ಫೆಬ್ರುವರಿ 2024, 2:37 IST
Last Updated 14 ಫೆಬ್ರುವರಿ 2024, 2:37 IST
ಅಕ್ಷರ ಗಾತ್ರ

ಲಖನೌ: ಉತ್ತರಪ್ರದೇಶದಲ್ಲಿ ಫೆಬ್ರುವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹90 ಸಾವಿರ ಕೋಟಿ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೋದಿ ಅವರು ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ ₹91,456.89 ಕೋಟಿ ವೆಚ್ಚದ 60 ಮೆಗಾ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ. ಮುಂಬರುವ ದಿನಗಳಲ್ಲಿ ಈ ಯೋಜನೆಗಳಿಂದ ಉತ್ತರ ಪ್ರದೇಶದಲ್ಲಿ 81,424 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎನ್ನಲಾಗಿದೆ.

ಹೊಸ ಯೋಜನೆಗಳ ಉದ್ಘಾಟನೆಯಿಂದಾಗಿ ನೋಯ್ಡಾ, ಗ್ರೇಟರ್ ನೋಯ್ಡಾ, ಗಾಜಿಯಾಬಾದ್, ಮಥುರಾ ಮತ್ತು ಆಗ್ರಾ, ಲಖನೌ, ಕಾನ್ಪುರ, ವಾರಾಣಸಿ, ಬಸ್ತಿಯಲ್ಲಿ ಹೂಡಿಕೆ ಪ್ರಮಾಣ ಹೆಚ್ಚಾಗಲಿದೆ. ಜತೆಗೆ, ಆರ್ಥಿಕ ಬೆಳವಣಿಗೆ ಉತ್ತಮವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT