ಪುಣೆ: ಇಲ್ಲಿನ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಗೆ ಶನಿವಾರ ಭೇಟಿ ನೀಡಿರುವ ಪ್ರಧಾನಿ ಮೋದಿ ಕೊರೊನಾ ಸೋಂಕಿನ ವಿರುದ್ಧ ಅಭಿವೃದ್ಧಿಪಡಿಸಲಾಗುತ್ತಿರುವ ಕೋವಿಡ್ ಲಸಿಕೆಯ ಪ್ರಗತಿ ಪರಿಶೀಲನೆ ಮಾಡಿದ್ದಾರೆ.

ಈ ವೇಳೆ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಕೋವಿಡ್ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿರುವ ತಂಡದೊಂದಿಗೆ ಸಂವಾದ ನಡೆಸಿರುವುದಾಗಿ ಮೋದಿ ತಿಳಿಸಿದ್ದಾರೆ.

ಈ ಬಗ್ಗೆ ಶನಿವಾರ ಸಂಜೆ ಟ್ವೀಟ್ ಮಾಡಿರುವ ಅವರು, 'ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಕೋವಿಡ್ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿರುವ ತಂಡದೊಂದಿಗೆ ಸಂವಾದ ನಡೆಸಿದ್ದೇನೆ. ಲಸಿಕೆ ತಯಾರಿಕೆಯಲ್ಲಿ ಈ ವರೆಗೂ ಸಾಧಿಸಿರುವ ಪ್ರಗತಿಯ ಬಗ್ಗೆ ಅವರು ಹಂಚಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಲಸಿಕೆ ತಯಾರಿಕೆಯ ವೇಗವನ್ನು ಹೆಚ್ಚಿಸಲು ಯಾವ ರೀತಿಯಲ್ಲಿ ಯೋಜನೆ ರೂಪಿಸಿದ್ದಾರೆ ಎಂಬುದರ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಅವರ ಉತ್ಪದನಾ ಸಾಮರ್ಥ್ಯದ ಬಗ್ಗೆಯೂ ತಿಳಿದುಕೊಂಡೆ' ಎಂದು ಹೇಳಿದ್ದಾರೆ.

ಪುಣೆಗೆ ತೆರಳುವುದಕ್ಕೂ ಮುನ್ನ ಅಹಮದಾಬಾದ್‌ನ ಜೈಡಸ್ ಕ್ಯಾಡಿಲಾ ಸಂಸ್ಥೆಯ ಉತ್ಪಾದನಾ ಘಟಕ ಮತ್ತು ಹೈದರಾಬಾದ್ ಭಾರತ್ ಬಯೋಟೆಕ್ ಘಟಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.

ಇದನ್ನೂ ಓದಿ...

ಕೋವಿಡ್ ಲಸಿಕೆ: ಭಾರತ್ ಬಯೋಟೆಕ್ ಘಟಕಕ್ಕೆ ಪ್ರಧಾನಿ ಮೋದಿ ಭೇಟಿ

ಕೋವಿಡ್ ಲಸಿಕೆ ಪ್ರಗತಿ ಪರಿಶೀಲನೆ: ಅಹಮದಾಬಾದ್ಗೆ ಮೋದಿ ಭೇಟಿ

ಕೊರೊನಾ ಸೋಂಕು ವಿರುದ್ಧದ ಲಸಿಕೆಯ ಬಿಡುಗಡೆಗೆ ಮುನ್ನ ಅದರ ಉತ್ಪಾದನೆ ಮತ್ತು ವಿತರಣಾ ವ್ಯವಸ್ಥೆಯ ಕುರಿತು ಮಾಹಿತಿ ಪಡೆಯುವ ಕ್ರಮವಾಗಿ ಪ್ರಧಾನಿ ಮೋದಿ ಈ ಭೇಟಿ ಹಮ್ಮಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.