ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌.ಕೆ.ಅಡ್ವಾಣಿ 96ನೇ ಜನ್ಮದಿನ: ಮನೆಗೆ ಭೇಟಿ ನೀಡಿ ಶುಭ ಕೋರಿದ ಪ್ರಧಾನಿ ಮೋದಿ

Published 8 ನವೆಂಬರ್ 2023, 15:40 IST
Last Updated 8 ನವೆಂಬರ್ 2023, 15:40 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್‌. ಕೆ. ಅಡ್ವಾಣಿ ಅವರ 96ನೇ ಜನ್ಮದಿನದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮೋದಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಅಡ್ವಾಣಿ ಮನೆಗೆ ಮೋದಿ ಜತೆಗೆ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಕೂಡ ಭೇಟಿ ನೀಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಅಡ್ವಾಣಿ ಅವರಿಗೆ ಶುಭಾಶಯ ಕೋರಿದ್ದ ಮೋದಿ, ಅಡ್ವಾಣಿ ಅವರು ನಮ್ಮ ರಾಷ್ಟ್ರವನ್ನು ಬಲಪಡಿಸುವ ಕೊಡುಗೆಗಳನ್ನು ನೀಡಿದ ಸಮಗ್ರತೆ ಮತ್ತು ಸಮರ್ಪಣೆಯ ದಾರಿದೀಪ. ಅವರ ದೂರದೃಷ್ಟಿಯ ನಾಯಕತ್ವವು ರಾಷ್ಟ್ರೀಯ ಪ್ರಗತಿ ಮತ್ತು ಏಕತೆಯನ್ನು ಹೆಚ್ಚಿಸಿದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ. ರಾಷ್ಟ್ರ ನಿರ್ಮಾಣದ ಕಡೆಗೆ ಅವರ ಪ್ರಯತ್ನಗಳು 140 ಕೋಟಿ ಭಾರತೀಯರಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ’ ಎಂದು ಬರೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT