ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧದ ವಾಗ್ದಾಳಿಯನ್ನು ಮಂಗಳವಾರವೂ ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷದ ಕೆಲವರು 1947ರ ಬಳಿಕವೇ ಭಾರತ ಉದಯಿಸಿರುವುದಾಗಿ ಭಾವಿಸಿದ್ದಾರೆ ಎಂದು ಹೇಳಿದ್ದಾರೆ.

‘ಪ್ರಜಾಪ್ರಭುತ್ವ ಮತ್ತು ಚರ್ಚೆಗಳು ಶತಮಾನಗಳಿಂದ ಭಾರತದ ಅಂಗವಾಗಿವೆ. ಭಾರತ ಎಂಬುದು ಕಾಂಗ್ರೆಸ್‌ನ ಕೃಪೆಯಲ್ಲ’ ಎಂದು ಮೋದಿ ಹೇಳಿದ್ದಾರೆ.

ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿದ ಮೋದಿ, ಕುಟುಂಬ ರಾಜಕಾರಣವು ಪ್ರಜಾಪ್ರಭುತ್ವಕ್ಕೆ ತಗುಲಬಹುದಾದ ಅತಿಕೆಟ್ಟ ಅಂಶ. ದೇಶದ ಮೇಲೆ ಒಂದು ಕುಟುಂಬ ಪ್ರಾಬಲ್ಯ ಸಾಧಿಸಿದಾಗ ದೊಡ್ಡ ಅಪಾಯವಿದೆ ಎಂದು ಹೇಳಿದ್ದಾರೆ.

ಚುನಾವಣೆಗಳಲ್ಲಿ ಸೋತರೂ ಕಾಂಗ್ರೆಸ್‌ನ ಅಹಂಕಾರ ಕಡಿಮೆಯಾಗಿಲ್ಲ: ಮೋದಿ

ತನ್ನ ಹಿರಿಯರು ಮಾಡಿರುವ ತಪ್ಪುಗಳ ಆಧಾರದಲ್ಲಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಪಕ್ಷವು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಮೋದಿ ಟೀಕಿಸಿದ್ದಾರೆ.

ಮೋದಿ ಅವರು ವಾಗ್ದಾಳಿ ಮುಂದುವರಿಸುತ್ತಿದ್ದಂತೆಯೇ, ಇದನ್ನು ಪ್ರತಿಭಟಿಸಿ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರನಡೆದರು.

ಸೋಮವಾರ ಲೋಕಭೆಯಲ್ಲಿಯೂ ಪ್ರಧಾನಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

‘ಕಾಂಗ್ರೆಸ್ ಪಕ್ಷದ್ದು ಒಡೆದು ಆಳುವ ನೀತಿ. ಅದೇ ಕಾರಣಕ್ಕೆ ಈಗ ಅದು ‘ತುಕ್ಡೆ ತುಕ್ಡೆ ಗ್ಯಾಂಗ್’ಗೆ ನಾಯಕನಾಗಿದೆ. ಆ ಪಕ್ಷದ ಮುಖಂಡರ ಹೇಳಿಕೆ, ನಡವಳಿಕೆ ಗಮನಿಸಿದರೆ 100 ವರ್ಷ ಅಧಿಕಾರದಿಂದ ದೂರವಿರಲು ನಿರ್ಧರಿಸಿದಂತಿದೆ. ಹಲವು ಚುನಾವಣೆಗಳಲ್ಲಿ ಸೋತ ಬಳಿಕವೂ ಕಾಂಗ್ರೆಸ್ 'ಅಹಂಕಾರ'ದಲ್ಲಿ ಕಡಿಮೆ ಆಗಿಲ್ಲ‘ ಎಂದು ಲೋಕಸಭೆಯಲ್ಲಿ ಮೋದಿ ಹೇಳಿದ್ದರು.

ಕಾಂಗ್ರೆಸ್ ತುಕ್ಡೆ, ತುಕ್ಡೆ ಗ್ಯಾಂಗ್ನ ನಾಯಕ: ಲೋಕಸಭೆಯಲ್ಲಿ ಪ್ರಧಾನಿ ಟೀಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.