ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವ ಬದಲು ನೀಟ್ ಬಗ್ಗೆ ಪ್ರಧಾನಿ ಮಾತಾಡಲಿ: ಒಮರ್

Published 24 ಜೂನ್ 2024, 9:58 IST
Last Updated 24 ಜೂನ್ 2024, 9:58 IST
ಅಕ್ಷರ ಗಾತ್ರ

ಶ್ರೀನಗರ: ಲೋಕಸಭಾ ಅಧಿವೇಶನದ ಮೊದಲ ದಿನ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವ ಬದಲು ನೀಟ್‌ ಅಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕಿತ್ತು ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಒಮರ್‌ ಅಬ್ದುಲ್‌ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ವಿರೋಧ ಪಕ್ಷಗಳ ಮೇಲೆ ದಾಳಿ ಮಾಡುವುದು ಪ್ರಧಾನ ಮಂತ್ರಿಗಳ ವಿಶೇಷ ಹಕ್ಕು‌. ಇತ್ತೀಚಿನ ಚುನಾವಣಾ ಫಲಿತಾಂಶದಿಂದ ಬಿಜೆಪಿಯು ಮೃದುವಾಗಿದೆ ಎಂದು ನಾವು ಭಾವಿಸುವುದಿಲ್ಲ. ನೀಟ್ ಹಗರಣದಿಂದ ತೊಂದರೆಗೀಡಾದ ಯುವಕ ಯವತಿಯರ ಬಗ್ಗೆ ಪ್ರಧಾನಿಯವರು ಕೆಲವು ಮಾತುಗಳನ್ನಾಡಿದ್ದರೆ ಸೂಕ್ತವಾಗಿರುತ್ತಿತ್ತು’ ಎಂದು ತಿಳಿಸಿದ್ದಾರೆ.

ದೇಶಕ್ಕೆ ಜವಾಬ್ದಾರಿಯುತ ಪ್ರತಿಪಕ್ಷದ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ ಬೆನ್ನಲ್ಲೇ ಒಮರ್‌ ಈ ಮಾತುಗಳನ್ನಾಡಿದ್ದಾರೆ.

18ನೇ ಲೋಕಸಭಾ ಅಧಿವೇಶನದ ಮೊದಲ ದಿನ ಮಾತನಾಡಿದ ಪ್ರಧಾನಿ ಮೋದಿ, ‘ಜನರು ಪ್ರತಿಪಕ್ಷಗಳಿಂದ ಉತ್ತಮ ನಡೆಯನ್ನು ನಿರೀಕ್ಷಿಸುತ್ತಾರೆ. ಆದರೆ ಪ್ರತಿಪಕ್ಷಗಳು ಆ ರೀತಿಯಲ್ಲಿ ವರ್ತಿಸುತ್ತಿಲ್ಲ. ಸಂಸತ್ತಿನಲ್ಲಿ ಜನರು ಚರ್ಚೆ ಬಯಸುತ್ತಾರೆಯೇ ವಿನಃ ಘೋಷಣೆಗಳನಲ್ಲ. ದೇಶಕ್ಕೆ ಜವಾಬ್ದಾರಿಯುತ ಪ್ರತಿಪಕ್ಷದ ಅಗತ್ಯವಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಮೇ 5ರಂದು ನಡೆದಿದ್ದ ನೀಟ್‌–ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್‌ ದಾಖಲಿಸಿದ್ದು, ವಿಶೇಷ ತಂಡಗಳನ್ನು ರಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT