ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಲ್ಕ್ಯಾರಾ’ ಸುರಂಗ ಕಾರ್ಮಿಕರ ರಕ್ಷಣೆ: ತಂಡ ಕಾರ್ಯಕ್ಕೆ ಉದಾಹರಣೆ– ಮೋದಿ ಶ್ಲಾಘನೆ

Published 29 ನವೆಂಬರ್ 2023, 12:30 IST
Last Updated 29 ನವೆಂಬರ್ 2023, 12:30 IST
ಅಕ್ಷರ ಗಾತ್ರ

ನವದೆಹಲಿ: ‘ಸಿಲ್ಕ್ಯಾರಾ’ ಸುರಂಗ ಕಾರ್ಮಿಕರ ರಕ್ಷಣೆಯು ತಂಡದ ಕಾರ್ಯಕ್ಕೆ ಅತ್ಯುತ್ತಮ ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಈ ಕಾರ್ಯದಲ್ಲಿ ಭಾಗಿಯಾಗಿದ್ದ ಪ್ರತಿಯೊಬ್ಬರು ತಂಡದ ಕಾರ್ಯ ಮತ್ತು ಮಾನವೀಯತೆಗೆ ಉದಾಹರಣೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೆ, ರಕ್ಷಿಸಲಾದ ಕಾರ್ಮಿಕರ ಜೊತೆಗೂ ದೂರವಾಣಿಯಲ್ಲಿ ಮಾತನಾಡಿದ ಅವರ ಆರೋಗ್ಯವನ್ನು ವಿಚಾರಿಸಿದರು. ಬಹು ಏಜೆನ್ಸಿಗಳು ಭಾಗಿಯಾಗಿದ್ದ ಈ ರಕ್ಷಣಾ ಕಾರ್ಯಾಚರಣೆಯು ಎಲ್ಲರನ್ನು ಭಾವನಾತ್ಮಕವಾಗಿಸಿತ್ತು ಎಂದು ಹೇಳಿದ್ದಾರೆ.

‘ಎಕ್ಸ್’ ಜಾಲತಾಣದಲ್ಲಿ ಸಂದೇಶ ಪೋಸ್ಟ್ ಮಾಡಿರುವ ಅವರು, ಸುರಂಗದಲ್ಲಿ ಸಿಕ್ಕಿಬಿದ್ದಿದ್ದ 41 ಕಾರ್ಮಿಕ ತಾಳ್ಮೆ ಹಾಗೂ ಧೈರ್ಯ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ. ಉತ್ತಮ ಆರೋಗ್ಯ ಅವರಿಗೆ ಲಭಿಸಲಿ ಎಂದು ಆಶಿಸಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT