ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.12ಕ್ಕೆ ಒಂದು ಲಕ್ಷ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

Published 11 ಫೆಬ್ರುವರಿ 2024, 13:02 IST
Last Updated 11 ಫೆಬ್ರುವರಿ 2024, 13:02 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಆಯ್ಕೆಯಾಗಿರುವ 1 ಲಕ್ಷಕ್ಕೂ ಹೆಚ್ಚು ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಫೆ.12ರಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಇಲ್ಲಿ ನಿರ್ಮಾಣವಾಗಲಿರುವ ‘ಕರ್ಮಯೋಗಿ ಭವನ’ದ ಮೊದಲನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

ದೇಶದಾದ್ಯಂತ 47 ಕಡೆಗಳಲ್ಲಿ ಉದ್ಯೋಗ ಮೇಳ ನಡೆಯಲಿದೆ. ಕಂದಾಯ, ಗೃಹ ವ್ಯವಹಾರ, ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣ. ರಕ್ಷಣೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಆಯ್ಕೆಯಾದವರು ಇದರಲ್ಲಿ ಸೇರಿದ್ದಾರೆ ಎಂದು ಅದು ತಿಳಿಸಿದೆ.

ಉದ್ಯೋಗ ಮೇಳವು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT