ನವದೆಹಲಿ: ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 35 ವೈದ್ಯಕೀಯ ಆಮ್ಲಜನಕ ಘಟಕಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಅ.7) ಉದ್ಘಾಟಿಸುವರು.

ಉತ್ತರಾಖಂಡದ ಹೃಷಿಕೇಶದಲ್ಲಿರುವ ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್) ಶಾಖೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನಮಂತ್ರಿ ಕಚೇರಿ (ಪಿಎಂಒ) ಪ್ರಕಟಣೆ ತಿಳಿಸಿದೆ.

‘ಈ ಘಟಕಗಳ ಉದ್ಘಾಟನೆಯೊಂದಿಗೆ ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಆಮ್ಲಜನಕ ಘಟಕಗಳನ್ನು ಹೊಂದಿದಂತಾಗಲಿದೆ’ ಎಂದು ಪಿಎಂಒ ತಿಳಿಸಿದೆ.

‘ಕೋವಿಡ್ ಪಿಡುಗು ಕಾಣಿಸಿಕೊಂಡ ನಂತರ, ದೇಶದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಲಭ್ಯತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ಘಟಕಗಳ ನಿರ್ವಹಣೆ ಹಾಗೂ ಕಾರ್ಯಾಚರಣೆಗಾಗಿ 7 ಸಾವಿರಕ್ಕೂ ಅಧಿಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ’ ಎಂದೂ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.