ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸ್ವಚ್ಛ ಭಾರತ್‌', ‘ಅಮೃತ್‌’ ಎರಡನೇ ಹಂತದ ಯೋಜನೆಗಳಿಗೆ ಶುಕ್ರವಾರ ಪ್ರಧಾನಿ ಚಾಲನೆ

Last Updated 30 ಸೆಪ್ಟೆಂಬರ್ 2021, 11:33 IST
ಅಕ್ಷರ ಗಾತ್ರ

ನವದೆಹಲಿ: ನಗರ ಸ್ವಚ್ಛ ಭಾರತ್ ಮಿಷನ್ (ಎಸ್‌ಬಿಎಂ–ಯು), ಅಮೃತ್‌ (ಅಟಲ್ ಮಿಷನ್ ಫಾರ್ ರಿಜುವೆನೇಷನ್– ಅರ್ಬನ್ ಟ್ರಾನ್ಸ್ ಫಾರ್ಮೇಷನ್) ಎರಡನೇ ಹಂತದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಲಿದ್ದಾರೆ.

ಪ್ರಧಾನ ಮಂತ್ರಿಯವರ ದೂರದೃಷ್ಟಿಗೆ ಅನುಗುಣವಾಗಿ, ಎಲ್ಲಾ ನಗರಗಳನ್ನು ಕಸ ಮುಕ್ತಗೊಳಿಸುವ ಮತ್ತು ನೀರಿನ ಲಭ್ಯತೆ ಖಾತ್ರಿಪಡಿಸುವ ಮಹಾತ್ವಾಕಾಂಕ್ಷೆಯೊಂದಿಗೆ ಎಸ್‌ಬಿಎಂ- ಯು 2.0 ಮತ್ತು ಅಮೃತ್‌ 2.0 ಯೋಜನೆಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಪ್ರಧಾನಿ ಕಚೇರಿ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.

ಇಲ್ಲಿನ ಡಾ.ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಎರಡು ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಕ್ಷಿಪ್ರ ನಗರೀಕರಣದ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು 2030ರ ವೇಳೆಗೆ ಸಾಧಿಸಬೇಕಿರುವ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಈ ಎರಡು ಮಹತ್ವಾಕಾಂಕ್ಷಿ ಯೋಜನೆಗಳು ಕೊಡುಗೆ ನೀಡಲಿವೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ, ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಗರಾಭಿವೃದ್ಧಿ ಸಚಿವರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT