ನವದೆಹಲಿ: ಉದ್ಯೋಗ ಸೃಷ್ಟಿಯ ಗುರಿಯನ್ನು ಹೊಂದಿರುವ ‘ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ’ ಆಗಸ್ಟ್ 1ರಿಂದ ಜಾರಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿದ್ದ ಈ ಯೋಜನೆಯು ಅನುಷ್ಠಾನಗೊಳ್ಳಲಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ತಿಳಿಸಿದೆ.

₹99,446 ಕೋಟಿ ವೆಚ್ಚದ ಈ ಯೋಜನೆಯು ಎರಡು ವರ್ಷಗಳಲ್ಲಿ 3.5 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಅದರಲ್ಲಿ ಸುಮಾರು 1.92 ಕೋಟಿ ಜನ ಮೊದಲ ಬಾರಿಗೆ ಉದ್ಯೋಗ ಪಡೆಯಲಿದ್ದಾರೆ. ಈ ಯೋಜನೆಯ ಇದೇ ಆಗಸ್ಟ್ 1ರಿಂದ 2027 ಜುಲೈ 31ರವರೆಗೆ ಉದ್ಯೋಗ ಪಡೆಯುವವರಿಗೆ ಪ್ರಯೋಜನಕಾರಿಯಾಗಲಿದೆ.

ಈ ಯೋಜನೆಯು ಎರಡು ಭಾಗಗಳನ್ನು ಹೊಂದಿದ್ದು, ಒಂದು ಉದ್ಯೋಗ ಪಡೆಯುವವರಿಗೆ ಸಂಬಂಧಿಸಿದ್ದು, ಇನ್ನೊಂದು ಉದ್ಯೋಗದಾತರಿಗೆ ಸಂಬಂಧಿಸಿರುತ್ತದೆ. 1 ಲಕ್ಷಕ್ಕೂ ಅಧಿಕ ವೇತನದ ಉದ್ಯೋಗ ಪಡೆಯುವವರಿಗೆ ಪಿಂಚಣಿ ಮಾಸಿಕ ಕಂತು ₹15 ಸಾವಿರ ಭರಿಸಲಾಗುತ್ತದೆ.

1 ಲಕ್ಷಕ್ಕೂ ಅಧಿಕ ವೇತನದ ಉದ್ಯೋಗ ನೀಡುವವರಿಗೂ ಎರಡು ವರ್ಷ ಮಾಸಿಕ ₹3 ಸಾವಿರ ಪ್ರೋತ್ಸಾಹಧನವನ್ನು ಈ ಯೋಜನೆಯ ಮೂಲಕ ನೀಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.