ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಾರ್ಖಂಡ್: ಸಚಿವ ಆಲಂಗೀರ್‌ ಆಲಂ ಬಂಧನ ಅವಧಿ ವಿಸ್ತರಣೆ

₹32 ಕೋಟಿ ನಗದು ಪತ್ತೆಯಾಗಿದ್ದ ಪ್ರಕರಣ
Published 27 ಮೇ 2024, 14:05 IST
Last Updated 27 ಮೇ 2024, 14:05 IST
ಅಕ್ಷರ ಗಾತ್ರ

ರಾಂಚಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರ ಬಂಧನದ ಅವಧಿಯನ್ನು ಮೂರು ದಿನಗಳ ಕಾಲ ವಿಸ್ತರಿಸಿ ವಿಶೇಷ ನ್ಯಾಯಾಲಯ (ಪಿಎಂಎಲ್‌ಎ) ಸೋಮವಾರ ಆದೇಶಿಸಿದೆ. 

ಆಲಂ ಅವರ ಸ್ಥಿರಾಸ್ತಿಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರ ಹಾಗೂ ಹೆಚ್ಚಿನ ವಿಚಾರಣೆಗಾಗಿ ಇನ್ನೂ ಮೂರು ದಿನಗಳ ಕಾಲ ಆಲಂ ಅವರ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಇ.ಡಿ, ನ್ಯಾಯಾಲಯಕ್ಕೆ ಕೋರಿತ್ತು. ಅದರಂತೆ ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ. 

ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ (52) ಮತ್ತು ಅವರ ಮನೆಗೆಲಸ ಮಾಡುತ್ತಿದ್ದ ಜಹಾಂಗೀರ್ ಆಲಂ (42) ಅವರಿಗೆ ಸಂಬಂಧಿಸಿದ ಪ್ರದೇಶದಲ್ಲಿ ಸುಮಾರು ₹32 ಕೋಟಿ ನಗದು ಪತ್ತೆಯಾಗಿತ್ತು. ನಂತರ ಇಬ್ಬರನ್ನೂ ಇ.ಡಿ ಬಂಧಿಸಿತ್ತು.  

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಹಣ ಅಕ್ರಮ ವರ್ಗಾವಣೆ ಮತ್ತು ಲಂಚ ಪಡೆದಿರುವ ಆರೋಪದ ಕುರಿತು ಆಲಂ ಅವರ ವಿಚಾರಣೆ ನಡೆಸಲಾಗುತ್ತಿದೆ. ಮೇ 15ರಂದು ಆಲಂಗೀರ್‌ ಆಲಂ ಅವರನ್ನು ಬಂಧಿಸಲಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT