ಕೋಲ್ಕತ್ತ: ‘ಪ್ರಧಾನಿ ಮೋದಿ ಅವರ 'ಸಬ್ಕಾ ಸಾಥ್ ಸಬ್ಕಾ ವಿಕಾಸ್' ಮಂತ್ರವೇ ನಮ್ಮ ಸರ್ಕಾರದ ಸೂತ್ರವಾಗಿದೆ’ ಎಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸೋಮವಾರ ಹೇಳಿದ್ದಾರೆ.

ಸಾಲ್ಟ್ ಲೇಕ್ನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಸಂದರ್ಭದಲ್ಲಿ ನೀಡಲಾದ ಎಲ್ಲಾ ಭರವಸೆಗಳನ್ನು ಜಾರಿಗೆ ತರಲಾಗುವುದು’ ಎಂದು ಅವರು ಹೇಳಿದರು.

ಸುವೇಂದು ಅಧಿಕಾರಿ ಅವರಿಗೆ ಕಚೇರಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಕಚೇರಿಯನ್ನು ಹೂಗಳಿಂದ ಅಲಂಕರಿಸಿದ್ದು, ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಭಾರತ ಮಾತೆಯ ಚಿತ್ರಕ್ಕೆ ಪಕ್ಷದ ಮುಖ್ಯಸ್ಥರು ಪುಷ್ಟ ನಮನ ಸಲ್ಲಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿರುವ ಸ್ಥಾನಗಳ ಸಂಖ್ಯೆಯನ್ನು ಸೂಚಿಸುವ ಸಂಕೇತವಾಗಿ ಕಾರ್ಯಕರ್ತರು ಸುವೇಂದು ಅವರಿಗೆ 207 ಕಮಲದ ಹೂವುಗಳನ್ನು ನೀಡಿ ಸ್ವಾಗತಿಸಿದ್ದಾರೆ.

ಈ ವೇಳೆ ಬಿಧಾನನಗರ ಶಾಸಕ ಶರದ್ವತ್ ಮುಖರ್ಜಿ ಸೇರಿದಂತೆ ಹಲವು ಬಿಜೆಪಿ ಶಾಸಕರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ನ್ಯೂ ಟೌನ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿಗಳಿದ್ದು, ನಾವು ಜನರಿಗಾಗಿ ಕೆಲಸ ಮಾಡಬೇಕಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.