ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಪ್ರಕರಣದಲ್ಲಿ ತನ್ನನ್ನು ತಲೆಮರೆಸಿಕೊಂಡ ಆರ್ಥಿಕ ಅಪರಾಧಿ (ಎಫ್ಇಒ) ಎಂದು ಘೋಷಿಸುವಂತೆ ಕೋರಿದ್ದ ಅರ್ಜಿಯ ವಿಚಾರಣೆಯನ್ನು ಕೈ ಬಿಡುವಂತೆ ಕೋರಿ ವಜ್ರಾಭರಣ ವ್ಯಾಪಾರಿ ಮೆಹುಲ್ ಚೋಕ್ಸಿ ಮಾಡಿದ್ದ ಮನವಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.

ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಬಂಧಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಪ್ರಕರಣದ ಅರ್ಜಿ ವಿಚಾರಣೆ ವೇಳೆ ತನ್ನನ್ನು ಎಫ್ಇಒ ಎಂದು ಘೋಷಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇ.ಡಿ) ಅರ್ಜಿಯನ್ನು ಅರ್ಜಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿದ್ದರು.

ಭಾರತಕ್ಕೆ ಬೇಕಾದ ಪ್ರಕರಣಗಳಲ್ಲಿ ತಾನು ಈಗಾಗಲೇ ಅಧಿಕಾರಿಗಳ ವಶದಲ್ಲಿ ಇರುವುದಾಗಿ ಚೋಕ್ಸಿ ತಿಳಿಸಿದ್ದಾರೆ. ಭಾರತದ ಅಧಿಕಾರಿಗಳು ಆರೋಪಿಯನ್ನು ಹಸ್ತಾಂತರ ಮಾಡುವಂತೆ ಬೆಲ್ಜಿಯಂ ರಾಷ್ಟ್ರಕ್ಕೆ ಮನವಿಯನ್ನೂ ಸಲ್ಲಿಸಿದ್ದಾರೆ. ಹೀಗಾಗಿ, ಎಫ್ಇಒ ಎಂದು ಘೋಷಿಸುವಂತೆ ಕೋರಿರುವ ಅರ್ಜಿಯನ್ನು ತಿರಸ್ಕರಿಸಬೇಕೆಂಬ ಬೇಡಿಕೆಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

₹100 ಕೋಟಿ ಅಥವಾ ಅದಕ್ಕಿಂತಲೂ ಹೆಚ್ಚಿನ ವಂಚನೆ ಮಾಡಿ, ವಿದೇಶಕ್ಕೆ ಪರಾರಿಯಾದರೆ, ಅಂತಹ ವ್ಯಕ್ತಿಗಳನ್ನು ‘ಎಫ್ಇಒ’ ಎಂದು ಘೋಷಣೆ ಮಾಡಿದ ಸಂದರ್ಭದಲ್ಲಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನಿನ ಅಡಿಯಲ್ಲಿ ಅವಕಾಶ ಸಿಗಲಿದೆ.

ಈ ಪ್ರಕರಣದ ಆರೋಪಿಗಳಾದ ಚೋಕ್ಸಿ ಹಸ್ತಾಂತರ ಪ್ರಕ್ರಿಯೆ ಎದುರಿಸುತ್ತಿದ್ದರೆ, ನೀರವ್ ಮೋದಿ ಲಂಡನ್ ಜೈಲಿನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.