ಕರೂರು (ತಮಿಳುನಾಡು): ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ಅವರ ಪ್ರಚಾರ ವಾಹನದ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸೆ. 27ರಂದು 41 ಮಂದಿ ಸಾವಿಗೀಡಾದ ಕಾಲ್ತುಳಿತ ದುರಂತಕ್ಕೂ ಮುನ್ನ ಕರೂರು ರ್ಯಾಲಿಗೆ ಬರುತ್ತಿದ್ದ ವೇಳೆ ಮಾರ್ಗ ಮಧ್ಯೆ ಅಪಘಾತ ನಡೆಸಿದ್ದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ್ ಅವರನ್ನು ಹತ್ತಿರದಿಂದ ನೋಡಲು ಅಸಂಖ್ಯ ಅಭಿಮಾನಿಗಳು ತಮ್ಮ ದ್ವಿಚಕ್ರ ವಾಹನಗಳಲ್ಲಿ ಪ್ರಚಾರ ವಾಹನದ ಅಕ್ಕ–ಪಕ್ಕ ಬರುತ್ತಿದ್ದರು. ಈ ವೇಳೆ ಪ್ರಚಾರ ವಾಹನ ಅಭಿಮಾನಿಗಳ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ದೃಶ್ಯ ಹಲವು ಟಿವಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದರ ಆಧಾರದ ಮೇಲೆ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತಕ್ಕೆ ಕಾರಣವಾಗಿದ್ದ ಚಾಲಕನ ವಿರುದ್ಧ ಏಕೆ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್ ಕೂಡಾ ಪೊಲೀಸರನ್ನು ಪ್ರಶ್ನಿಸಿತ್ತು.
.Karur Stampede | ಮೃತರ ಸಂಖ್ಯೆ 40ಕ್ಕೆ ಏರಿಕೆ: ನ್ಯಾ. ಅರುಣಾ ಸಮಿತಿಯಿಂದ ತನಿಖೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.