ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕಾನ್‌ಸ್ಟೆಬಲ್

Published 18 ಆಗಸ್ಟ್ 2023, 6:39 IST
Last Updated 18 ಆಗಸ್ಟ್ 2023, 6:39 IST
ಅಕ್ಷರ ಗಾತ್ರ

ಜೈಪುರ: ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ನನ್ನು ಮಂಚಕ್ಕೆ ಕಟ್ಟಿ ಸ್ಥಳೀಯರು ಥಳಿಸಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.

‘ಕಾನ್‌ಸ್ಟೆಬಲ್‌ ಮಹೇಶ್‌ ಕುಮಾರ್‌ ಗುರ್ಜರ್‌ ಅವರು ಮಂಗಳವಾರ ರಾತ್ರಿ 30 ವರ್ಷದ ಮಹಿಳೆ ಮನೆಯಲ್ಲಿ ಒಂಟಿಯಾಗಿರುವಾಗ ಆಕೆಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ. ಆಕೆ ಕಿರುಚಿಕೊಂಡಾಗ ನೆರೆಹೊರೆಯವರು ಸಹಾಯಕ್ಕೆ ಬಂದು ಆರೋಪಿಯನ್ನು ಹಿಡಿದಿದ್ದಾರೆ. ಅಷ್ಟರಲ್ಲಿ ಆಕೆಯ ಕುಟುಂಬಸ್ಥರು ಆತನನ್ನು ಮಂಚಕ್ಕೆ ಕಟ್ಟಿ ಥಳಿಸಿದ್ದಾರೆ’ ಎಂದು ಸರ್ಕಲ್‌ ಆಫೀಸರ್‌ (ಸಿಒ) ಈಶ್ವರ್‌ ಸಿಂಗ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಬಸ್ವಾ ಪೊಲೀಸ್‌ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗುರ್ಜರ್‌ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಿದ್ದು, ಬಳಿಕ ಗುರ್ಜರ್‌ ಅವರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಸಿಂಗ್‌ ಹೇಳಿದ್ದಾರೆ. ಘಟನೆ ಸಂಬಂಧ ವಿವಾಹಿತ ಮಹಿಳೆ ದೂರು ನೀಡಿದ್ದಾರೆ.

ಗುರುವಾರ ಮಹಿಳೆ ಪೊಲೀಸರಿಗೆ ದೂರು ನೀಡಿದ ಬಳಿಕ ವಿಚಾರ ತಿಳಿದು ಬಂದಿದೆ. ಮಂಗಳವಾರವೇ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದ ಬಸ್ವಾ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಮತ್ತು ಕಾನ್‌ಸ್ಟೆಬಲ್‌ ಗುರ್ಜರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆರೋಪಿ ಕಾನ್‌ಸ್ಟೆಬಲ್‌ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ ಎಂದು ಸಿಂಗ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT