ನವದೆಹಲಿ: ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳನ್ನು ಗುರುತಿಸುವ ಮತ್ತು ಗಡಿಪಾರು ಮಾಡುವ ವಿಶೇಷ ಕಾರ್ಯಾಚರಣೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ. ಏತನ್ಮಧ್ಯೆ ರಾಜಧಾನಿಯಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶದ ತಾಯಿ–ಮಗನನ್ನು ಬಂಧಿಸಿದ ಪೊಲೀಸರು ಅವರನ್ನು ಗಡಿಪಾರು ಮಾಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ನಜ್ಮಾ ಖಾನ್ ಮತ್ತು ಆಕೆಯ ಮಗ ನಯಿಮ್ ಖಾನ್ (22) ಎಂಬವರನ್ನು ಗಡಿಪಾರು ಮಾಡಲಾಗಿದೆ. ನಜ್ಮಾ ಖಾನ್ ಅವರು 2005ರಿಂದ ನೈರುತ್ಯ ದೆಹಲಿಯಲ್ಲಿ ನೆಲೆಸಿದ್ದರು. ಇಬ್ಬರೂ ಪಶ್ಚಿಮ ಬಂಗಾಳದ ಗಡಿಯ ಮೂಲಕ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು. ನಜ್ಮಾ ಸುಮಾರು 20 ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದರೆ, ನಯಿಮ್ 2020ರಲ್ಲಿ ಬಂದಿದ್ದ ಎಂದು ಪೊಲೀಸ್ ಉಪ ಆಯುಕ್ತ (ನೈಋತ್ಯ) ಸುರೇಂದ್ರ ಚೌಧರಿ ಹೇಳಿದ್ದಾರೆ.

ತಾಯಿ -ಮಗ ಇಬ್ಬರೂ ಕಟ್ವಾರಿಯಾ ಸರಾಯ್ನಲ್ಲಿ ವಾಸಿಸುತ್ತಿದ್ದರು. ನಜ್ಮಾ ಅವರು ಮನೆಗೆಲಸಗಾರರಾಗಿ ಕೆಲಸ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಡಿಸೆಂಬರ್ 29ರಂದು ಗಸ್ತು ತಿರುಗುತ್ತಿದ್ದಾಗ, ಸುಳಿವಿನ ಮೇರೆಗೆ ಶಾಸ್ತ್ರಿ ಮಾರ್ಕೆಟ್ ಬಳಿ ನಯಿಮ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಪಶ್ಚಿಮ ಬಂಗಾಳದ ಗಡಿಯ ಮೂಲಕ ಭಾರತಕ್ಕೆ ಪ್ರವೇಶಿಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಬಳಿಕ ಆತನ ತಾಯಿ ನಜ್ಮಾರನ್ನು ಬಂಧಿಸಲಾಯಿತು. ಸದ್ಯ ಇಬ್ಬರನ್ನೂ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ (FRRO) ಹಸ್ತಾಂತರಿಸಲಾಗಿದೆ ಎಂದು ಸುರೇಂದ್ರ ಚೌಧರಿ ತಿಳಿಸಿದ್ದಾರೆ.

ದೆಹಲಿಯಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ, ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಲೆಫ್ಟಿನೆಂಟ್ ಗವರ್ನರ್ ಕಚೇರಿಯು, ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರಿಗೆ ಡಿ.11ರಂದು ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ದಾಖಲೆಗಳಿಲ್ಲದೇ ವಾಸಿಸುತ್ತಿರುವ ಜನರನ್ನು ಗುರುತಿಸುವ ಮತ್ತು ಗಡಿಪಾರು ಮಾಡುವ ವಿಶೇಷ ಕಾರ್ಯಾಚರಣೆಯನ್ನು ದೆಹಲಿ ಪೊಲೀಸರು ಆರಂಭಿಸಿದ್ದಾರೆ.
.ದೆಹಲಿಯಲ್ಲಿ ಬಾಂಗ್ಲಾದ 175 ಅಕ್ರಮ ವಲಸಿಗರ ಪತ್ತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.