‘ಅಶೋಕ ಚಕ್ರ ಇರಬೇಕಿದ್ದ ಜಾಗದಲ್ಲಿ ಅರ್ಧಚಂದ್ರ ಮತ್ತು ನಕ್ಷತ್ರ ಇರುವ ರಾಷ್ಟ್ರಧ್ವಜವನ್ನು ವಾಹನಕ್ಕೆ ಕಟ್ಟಿ ಮೆರವಣಿಗೆ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕೂಡಲೇ ಕಾರ್ಯಾಚರಣೆ ನಡೆಸಿ ಧ್ವಜಸಂಹಿತೆ ಉಲ್ಲಂಘಿಸಿದ ಇಬ್ಬರನ್ನು ಬಂಧಿಸಲಾಗಿದೆ, ಉಳಿದವರನ್ನೂ ಶೀಘ್ರವೇ ಬಂಧಿಸಲಾಗುವುದು’ ಎಂದು ಸಾರಣ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.