ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಟ್ರ್ಯಾಕ್ಟರ್ ರ‍್ಯಾಲಿ ಗಲಭೆ: ಆರೋಪಿ ಸಿಧು ಮತ್ತಿತರರ ವಿರುದ್ಧ ಪೂರಕ ಚಾರ್ಜ್‌ಶೀಟ್

ಫಾಲೋ ಮಾಡಿ
Comments

ನವದೆಹಲಿ: ಕಳೆದ ವರ್ಷ ಗಣರಾಜ್ಯೋತ್ಸವದ ವೇಳೆ ದೆಹಲಿಯ ಕೆಂಪುಕೋಟೆ ಬಳಿ ನಡೆದ ಗಲಭೆಗೆ ಸಂಬಂಧಿಸಿ ದಂತೆ ನಟ–ಹೋರಾಟಗಾರ ದೀಪ್‌ ಸಿಧು ಮತ್ತು ಇತರರ ವಿರುದ್ಧ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಪೂರಕ ಚಾರ್ಜ್‌ ಶೀಟ್ ಸಲ್ಲಿಸಿದ್ದಾರೆ.

ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗಜೇಂದ್ರ ಸಿಂಗ್ ನಗರ ಅವರು ಜೂನ್ 19 ರಂದು ಮಧ್ಯಾಹ್ನ 2 ಗಂಟೆಗೆ ಹೊಸ ಚಾರ್ಜ್‌ಶೀಟ್‌ ಪರಿಶೀಲಿಸಿ ಆದೇಶ ನೀಡಲಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ,ಜನವರಿ 26 ರಂದು ರೈತ ಸಂಘಟನೆಗಳು ಆಯೋಜಿಸಿದ್ದ ‘ಟ್ರ್ಯಾಕ್ಟರ್ ರ‍್ಯಾಲಿ‘ಯಲ್ಲಿ ದೆಹಲಿಯ ಕೆಂಪುಕೋಟೆಯ ಬಳಿ ಕೆಲವರು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ಇದೇ ವೇಳೆ ಕೆಲವರು ಕೆಂಪು ಕೋಟೆಗೆ ನುಗ್ಗಿ, ಪೊಲೀಸರನ್ನು ಗಾಯಗೊಳಿಸಿದ್ದರು. ಈ ಘಟನೆಯಲ್ಲಿ ನಟ ಸಿಧು ಸೇರಿದಂತೆ 16 ಮಂದಿಯನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT