ಹೈದರಾಬಾದ್: ಎರಡು ವರ್ಷಗಳಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಸತ್ಯಸಾಯಿ ಜಿಲ್ಲೆಯಿಂದ ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ 13 ಜನರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದು, ಪ್ರಸ್ತುತ ಅನಂತಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಮಾಡುವ ದೃಶ್ಯವನ್ನು ವಿಡಿಯೊ ಮಾಡಿಕೊಂಡಿದ್ದ ಆರೋಪಿಗಳು ಈ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸುವುದಾಗಿ ಬೆದರಿಸಿ ಎರಡು ವರ್ಷಗಳಿಂದ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.