ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಣಸಿ: ಶುಕ್ರವಾರದ ಪ್ರಾರ್ಥನೆಗೂ ಮುನ್ನ ಪೊಲೀಸರಿಂದ ಪಥಸಂಚಲನ

Published 1 ಫೆಬ್ರುವರಿ 2024, 16:16 IST
Last Updated 1 ಫೆಬ್ರುವರಿ 2024, 16:16 IST
ಅಕ್ಷರ ಗಾತ್ರ

ವಾರಾಣಸಿ: ಶುಕ್ರವಾರ ಪ್ರಾರ್ಥನೆಗೂ ಮುನ್ನ ವಾರಾಣಸಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.

ವಿವಾದಿತ ಜ್ಞಾನವಾಪಿಯ ಮಸೀದಿಯ ನೆಲಮಹಡಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಟ್ಟ ಬಳಿಕದ ಮೊದಲ ಬಾರಿಗೆ ಶುಕ್ರವಾರದ ಪ್ರಾರ್ಥನೆ ನಡೆಯಲಿದೆ. ಹೀಗಾಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಶುಕ್ರವಾರದ ಪ್ರಾರ್ಥನೆಗೆ ಭಾರಿ ಸಂಖ್ಯೆಯಲ್ಲಿ ಜನ ಸೇರುತ್ತಾರೆ.

ಮುಂಜಾಗೃತ ಕ್ರಮವಾಗಿ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಲಾಗಿದೆ ಎಂದು ದಶೇಶ್‌ಮೇಘ್‌ ಪ್ರದೇಶದ ಸಹಾಯಕ ಪೊಲೀಸ್‌ ಕಮೀಷನರ್‌ ಪ್ರಗ್ಯಾ ಪಟ್ನಾಯಕ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT