ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸ್ತಿಪಟು ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ಅಂತ್ಯ; 14 ದಿನ ನ್ಯಾಯಾಂಗ ಬಂಧನಕ್ಕೆ

Last Updated 2 ಜೂನ್ 2021, 16:50 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಛತ್ರಸಾಲ ಕ್ರೀಡಾಂಗಣದಲ್ಲಿ ಯುವ ಕುಸ್ತಿಪಟುವನ್ನು ಹತ್ಯೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಒಲಿಂಪಿಕ್ ಪದಕ ವಿಜೇತ, ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಇನ್ನೂ ಮೂರು ದಿನಗಳ ಕಸ್ಟಡಿ ವಿಚಾರಣೆಗಾಗಿ ನೀಡಬೇಕು ಎಂದಿದ್ದ ದೆಹಲಿ ಪೊಲೀಸರ ಮನವಿಯನ್ನು ಬುಧವಾರ ನ್ಯಾಯಾಲಯ ತಿರಸ್ಕರಿಸಿದೆ ಮತ್ತು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಾಲ್ಕು ದಿನಗಳ ಪೊಲೀಸ್ ಕಸ್ಟಡಿಯ ಕೊನೆಯಾಗಿದ್ದರಿಂದಾಗಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಶ್ಮಿ ಗುಪ್ತಾ ಅವರ ಮುಂದೆ ಹಾಜರುಪಡಿಸಲಾಗಿದ್ದ ಸುಶೀಲ್ ಕುಮಾರ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು.

ಸುಶೀಲ್ ಕುಮಾರ್ ಅವರು, ಕೊಲೆ ಮತ್ತು ಅಪಹರಣದ ಆರೋಪ ಎದುರಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಕುಸ್ತಿಪಟುವನ್ನು ಮೇ 23 ರಂದು ಬಂಧಿಸಲಾಯಿತು. ಆತನ ಬಂಧನದ ನಂತರ ನ್ಯಾಯಾಲಯವು ಆತನನ್ನು ಆರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ನಂತರ ಅದನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT