ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡೀಗಢ: ನಿಹಾಂಗ್ ಗುಂಪಿನಿಂದ ಪೊಲೀಸರ ಮೇಲೆ ಗುಂಡಿನ ದಾಳಿ– ಕಾನ್‌ಸ್ಟೆಬಲ್ ಸಾವು

Published 23 ನವೆಂಬರ್ 2023, 5:26 IST
Last Updated 23 ನವೆಂಬರ್ 2023, 5:26 IST
ಅಕ್ಷರ ಗಾತ್ರ

ಚಂಡೀಗಢ: ಪಂಜಾಬ್‌ನ ಕಪುರ್ತಲಾ ಜಿಲ್ಲೆಯಲ್ಲಿ 'ನಿಹಾಂಗ್' ಸಿಖ್ಖರ ಗುಂಪೊಂದು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸ್ ಪೇದೆಯೊಬ್ಬರು ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಲ್ತಾನ್‌ಪುರ ಲೋಧಿಯಲ್ಲಿ ನಿಹಾಂಗ್‌ ಗುಂಪಿಗೆ ಸೇರಿದ ಕೆಲವರನ್ನು ಬಂಧಿಸಲು ಹೋದಾಗ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿಹಾಂಗ್‌ಗಳು ಗುಂಡಿನ ದಾಳಿ ನಡೆಸಿದಾಗ ಪೊಲೀಸರು ರಸ್ತೆಯಲ್ಲಿ ನಿಂತಿದ್ದರು ಎಂದು ಕಪುರ್ತಲಾ ಪೊಲೀಸ್ ವರಿಷ್ಠಾಧಿಕಾರಿ ತೇಜ್‌ಬೀರ್ ಸಿಂಗ್ ಹುಂದಾಲ್ ಪಿಟಿಐಗೆ ತಿಳಿಸಿದ್ದಾರೆ.

ಗುಂಡಿನ ದಾಳಿ ವೇಳೆ ಒಬ್ಬ ಕಾನ್‌ಸ್ಟೆಬಲ್ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಅಧಿಕ ಪ್ರಮಾಣದ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT