ಗರಿಯಾಬಂದ್ (ಛತ್ತೀಸಗಢ): ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದ ವಿಶೇಷ ಸಶಸ್ತ್ರ ಪಡೆಯ 34ನೇ ಬೆಟಾಲಿಯನ್‌ಗೆ ಸೇರಿದ ಹೆಡ್ ಕಾನ್‌ಸ್ಟೆಬಲ್ ಜಿಯಾಲಾಲ್ ಪವಾರ್ ಅವರು ಆತ್ಮಹತ್ಯೆ ಮಾಡಿಕೊಂಡವರು.

ಗರಿಯಾಬಂದ್ ಮಹಾಸಮುಂಡ್ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುತ್ತಿದ್ದಾಗ ಪಿಪಾರ್ಚೇಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಡೆದದಾರ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 9.30ರ ಸುಮಾರಿಗೆ ಜಿಯಾಲಾಲ್ ಪವಾರ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ.

ಜಿಯಾ ಲಾಲ್ ಅವರು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿಯ ತಂಡದಲ್ಲಿ ಇದ್ದರು. ಆದರೆ, ಅವರನ್ನು ಸಕ್ರಿಯ ಚುನಾವಣಾ ಕಾರ್ಯಕ್ಕೆ ನಿಯೋಜಿಸಿರಲಿಲ್ಲ. ಮೀಸಲು ತಂಡದಲ್ಲಿರಿಸಲಾಗಿತ್ತು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.