ನವದೆಹಲಿ: ದೇಶದಲ್ಲಿ ಪ್ರಸ್ತುತ ಶೇ 21 ರಷ್ಟು ಸಂಸದರು, ಶಾಸಕರು ವಂಶಪಾರಂಪರೆಯ ಹಿನ್ನೆಲೆಯನ್ನು ಹೊಂದಿದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ತನ್ನ ವರದಿಯಲ್ಲಿ ಈ ಅಂಶವನ್ನು ಬೆಳಕಿಗೆ ತಂದಿದೆ.

ಪ್ರಸ್ತುತ ದೇಶದಾದ್ಯಂತ ಸಂಸದರು, ಶಾಸಕರು, ವಿಧಾನ ಪರಿಷತ್ಗಳ ಸದಸ್ಯರಾಗಿರುವವರು ಐದರಲ್ಲಿ ಒಬ್ಬರು ಕುಟುಂಬ ರಾಜಕಾರಣದ ಹಿನ್ನೆಲೆಯನ್ನು ಹೊಂದಿದ್ದಾರೆ ಎಂದು ವರದಿ ಹೇಳಿದೆ.

ಸದ್ಯ ದೇಶದಾದ್ಯಂತ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರ ಸಂಖ್ಯೆ 5,204. ಪ್ರಸ್ತುತ ವಂಶಪಾರಂಪರೆಯ ಹಿನ್ನೆಲೆಯನ್ನು ಹೊಂದಿರುವವರ ಪ್ರಮಾಣ ಲೋಕಸಭೆಯಲ್ಲಿ ಹೆಚ್ಚಿದೆ ಇದೆ ಎಂದು ವರದಿ ಹೇಳಿದೆ.

ಲೋಕಸಭೆಯಲ್ಲಿ ಇದರ ಪ್ರಮಾಣ ಶೇ 31. ಅಂದರೆ ಲೋಕಸಭೆಯಲ್ಲಿ ನೂರಕ್ಕೆ 31 ಸಂಸದರು ಕುಟುಂಬ ರಾಜಕಾರಣದ ಕುಡಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.